ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ₹150 ಕೋಟಿ ಅನುದಾನ: ಶಾಸಕ ಅಬ್ಬಯ್ಯ

| Published : Oct 28 2025, 12:18 AM IST

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ₹150 ಕೋಟಿ ಅನುದಾನ: ಶಾಸಕ ಅಬ್ಬಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ನನ್ನ ಕ್ಷೇತ್ರವನ್ನು ಮಾದರಿಯನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹುಬ್ಬಳ್ಳಿ: ಪೂರ್ವ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹150 ಕೋಟಿ ಅನುದಾನ ಶೀಘ್ರವೇ ಬಿಡುಗಡೆಯಾಗಲಿದ್ದು, ಕ್ಷೇತ್ರದ ಚಿತ್ರಣವೇ ಬದಲಾಗಲಿದೆ. ಈ ಮೂಲಕ ನನ್ನ ಕ್ಷೇತ್ರವನ್ನು ಮಾದರಿಯನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹಳೇಹುಬ್ಬಳ್ಳಿಯ ಎನ್.ಎ. ನಗರದ ಮುಖ್ಯ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹1 ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಪೂರ್ವ ಕ್ಷೇತ್ರದ ಸಮಗ್ರ ಒಳಚರಂಡಿ ಅಭಿವೃದ್ಧಿಗೆ ₹40 ಕೋಟಿ ಮತ್ತು ರಸ್ತೆಗಳ ಅಭಿವೃದ್ಧಿಗೆ ₹100 ಕೋಟಿ ಅನುದಾನ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದರಿಂದ ಪೂರ್ವ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದರು.

ಕಳೆದ 11 ವರ್ಷಗಳಿಂದ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಈಗಾಗಲೇ ₹1500 ಕೋಟಿಗೂ ಅಧಿಕ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಇನ್ನೂ ಅನೇಕ ಮಹತ್ವದ ಯೋಜನೆಗಳು ಬಾಕಿ ಇದ್ದು, ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಪೂರ್ವ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ಹೊಂದಲಾಗಿದೆ ಎಂದರು.

ಬಳಿಕ ಶಾಸಕ ಪ್ರಸಾದ ಅಬ್ಬಯ್ಯ ಅವರನ್ನು ನಗರದ ಯುವಕರು ಸನ್ಮಾನಿಸಿದರು. ಈ ವೇಳೆ ಪಾಲಿಕೆ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರ, ಮುಖಂಡರಾದ ಮುತವಲ್ಲಿ ಮಕ್ಬುಲ್‌ಅಹ್ಮದ್ ಕಳಸ, ರಫೀಕ್ ಸಂದಲವಾಲೆ, ಸದ್ದಾಮ್ ಬೆಂಗಳೂರ, ಅಷ್ಪಾಕ್ ಲಕ್ಕುಂಡಿ, ನಾಸಿರ್ ಅಸುಂಡಿ, ಸೈಯದ್ ಸಲೀಮ್ ಮುಲ್ಲಾ, ಮುಸ್ತಾಕ್ ಮುದಗಲ್, ತೌಫಿಕ್ ಕಾರಡಗಿ, ಅಲ್ತಾಫ್ ಮುಲ್ಲಾ, ಅಬ್ದುಲ್ ಕೋಳೂರ, ಮುಸ್ತಾಕ್ ಮುಳಗುಂದ ಸೇರಿದಂತೆ ಹಲವರಿದ್ದರು.