ಸಾರಾಂಶ
ಶಿವರಾತ್ರಿ ಜಾತ್ರೆ ನಿಮಿತ್ತ ಬೆಟ್ಟಕ್ಕೆ ಆಗಮಿಸಿದ ಭಕ್ತಾಧಿಗಳಿಂದ ಬಿಸಾಡಲಾಗಿದ್ದ ತ್ಯಾಜ್ಯ ಸಂಪೂರ್ಣ ಸಚ್ಛ
ಕನ್ನಡಪ್ರಭ ವಾರ್ತೆ ಹನೂರುಮಲೆ ಮದೇಶ್ವರ ಬೆಟ್ಟದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ 200 ಸಿಬ್ಬಂದಿ 150 ಟ್ರ್ಯಾಕ್ಟರ್ ತ್ಯಾಜ್ಯ ಸಂಗ್ರಹಿಸಿ ಸ್ವಚ್ಛತೆಗೊಳಿಸಿದ್ದಾರೆ ಎಂದು ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಮಾಹಿತಿ ನೀಡಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪ್ರಸಿದ್ಧ ಧಾರ್ಮಿಕ ಪುಣ್ಯ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ಧಾರ್ಮಿಕ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಹಾಗೂ ಜಾತ್ರೆಗೂ ಮುನ್ನಾ ಪಾದಯಾತ್ರೆಯಲ್ಲಿ ಬಂದಂತಹ ಭಕ್ತಾದಿಗಳು ಶ್ರೀ ಕ್ಷೇತ್ರದಲ್ಲಿ ಎಲ್ಲೆಂದರಲ್ಲಿ ಬಿಸಾಡಲಾಗಿದ್ದ ತ್ಯಾಜ್ಯಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸುವ ಮೂಲಕ ನಾಗರಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತ್ಯಾಜ್ಯ ಮುಕ್ತ ಕ್ಷೇತ್ರ:ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ 140 ಸಿಬ್ಬಂದಿ ಹಾಗೂ ಹೆಚ್ಚುವರಿಯಾಗಿ ದಿನಗೂಲಿ ನೌಕರರಾದ 50 ಸಿಬ್ಬಂದಿ ಸ್ವಚ್ಛತೆಯನ್ನು ನಿರಂತರವಾಗಿ ಹಮ್ಮಿಕೊಳ್ಳುವ ಮೂಲಕ 150 ಟ್ರ್ಯಾಕ್ಟರ್ ಕಸ ಸಂಗ್ರಹವಾಗಿದೆ ಮಲೆ ಮಹದೇಶ್ವರ ಬೆಟ್ಟ ಶ್ರೀ ಕ್ಷೇತ್ರ ತಾಳಬೆಟ್ಟ ಬಸವನಹಾದಿ ಪಾದಯಾತ್ರೆಗಳ ಸ್ಥಳ ಕೌದಳ್ಳಿ ಸಮೀಪ ಬರುವ ಮಾರಮ್ಮನ ದೇವಾಲಯ ಸಮೀಪ ಮತ್ತು ಮಲೆ ಮಾದೇಶ್ವರ ಬೆಟ್ಟದ ರಸ್ತೆಯುದ್ದಕ್ಕೂ ಅರಣ್ಯ ಪ್ರದೇಶದ ಭಾಗದಲ್ಲಿ ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯಗಳನ್ನು ಪಾದಯಾತ್ರೆಗಳು ಬಂದಂತಹ ಸಂದರ್ಭದಲ್ಲಿ ಬಳಸಿ ಎಲ್ಲೆಂದರಲ್ಲಿ ಬಿಸಾಡಲಾಗಿತ್ತು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ತಮ್ಮ ಕಾರ್ಯ ದಕ್ಷತೆ ಮೇಲೆ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡುವ ಮೂಲಕ ಖುದ್ದು ತಾವೇ ನಿಂತು ಸ್ವಚ್ಛತೆಗೆ ಆದ್ಯತೆ ನೀಡಿ ಕ್ರಮ ಕೈಗೊಳ್ಳುವ ಮೂಲಕ 150ಕ್ಕೂ ಹೆಚ್ಚು ಟ್ಯಾಕ್ಟರ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದ್ದಾರೆ.ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು ಹಾಗೂ ಪಾದಯಾತ್ರಿಗಳು ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಪ್ಲಾಸ್ಟಿಕ್ ಮುಕ್ತ ಶ್ರೀ ಕ್ಷೇತ್ರವಾಗಿದ್ದು ಸಹಕಾರ ನೀಡಬೇಕು ಮಹಾಶಿವರಾತ್ರಿಯಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛಗೊಳಿಸಲಾಗಿದೆ. ಭಕ್ತಾದಿಗಳು ಸಹ ಬರುವ ಮುನ್ನ ಪರ್ಯಾಯ ವ್ಯವಸ್ಥೆಯ ಮೂಲಕ ಶ್ರೀ ಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಆದರಿಂದ ಉತ್ತಮ ವಾತಾವರಣ ಉತ್ತಮ ಪರಿಸರ ನಿರ್ಮಾಣಕ್ಕೆ ಸಹಕಾರ ನೀಡಬೇಕು ಮುಂದಿನ ದಿನಗಳಲ್ಲಿ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಇರುವುದರಿಂದ ಭಕ್ತಾದಿಗಳು ಪ್ಲಾಸ್ಟಿಕ್ ತ್ಯಜಿಸಿ ಶ್ರೀ ಕ್ಷೇತ್ರವನ್ನು ಉಳಿಸಿ ಪರಿಸರವನ್ನು ರಕ್ಷಿಸುವ ಮೂಲಕ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಹಕಾರ ನೀಡಿ. ರಘು ,ಕಾರ್ಯದರ್ಶಿಗಳು, ಕ್ಷೇತ್ರಅಭಿವೃದ್ಧಿ ಪ್ರಾಧಿಕಾರ, ಮಲೆ ಮಹದೇಶ್ವರ ಬೆಟ್ಟ