ಕಾಂಗ್ರೆಸ್ ಸರ್ಕಾರ ಎಂದರೆ ಗ್ಯಾರಂಟಿ, ಗ್ಯಾರಂಟಿ ಎಂದರೆ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇದು ನಮ್ಮಗ್ಯಾರಂಟಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಮತಯಾಚನೆ ವೇಳೆ ಡಾ.ಪ್ರಭಾ ಹೇಳಿಕೆ । ನುಡಿದಂತೆ ನಡೆದಿದ್ದೇವೆ, ಮುಂದೂ ನಡೆಯುತ್ತೇವೆ ಎಂದು ಭರವಸೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಕಾಂಗ್ರೆಸ್ ಸರ್ಕಾರ ಎಂದರೆ ಗ್ಯಾರಂಟಿ, ಗ್ಯಾರಂಟಿ ಎಂದರೆ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇದು ನಮ್ಮಗ್ಯಾರಂಟಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಹೇಳಿದರು.

ಸೋಮವಾರ ಹರಿಹರ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಹರಿಹರ ತಾಲೂಕಿನ ಕುಣೆಬೆಳಕೆರೆ ಗ್ರಾಮದಿಂದ ಇಂದು ಪ್ರಚಾರ ಕಾರ್ಯ ಆರಂಭಿಸಿದ ಪ್ರಭಾ ಮಲ್ಲಿಕಾರ್ಜುನ್‌ ಅವರು ನಂದಿತಾವರೆ, ಭಾಸ್ಕರ್‌ ರಾವ್‌ ಕ್ಯಾಂಪ್, ವಿನಾಯಕ ನಗರ, ಕುಂಬಳೂರು, ನಿಟ್ಟೂರು, ಆದಾಪುರ, ಬೂದಿಹಾಳು, ನೆಹರು ಕ್ಯಾಂಪ್, ಗುಳದಹಳ್ಳಿ, ಸಂಕ್ಲೀಪುರ, ಮಲ್ಲನಾಯಕನಹಳ್ಳಿ, ಹರಳಹಳ್ಳಿ, ಹಾಲಿವಾಣ, ಕೊಪ್ಪ, ದಿಬ್ಬದಹಳ್ಳಿ, ಕೊಮಾರನಹಳ್ಳಿ, ಜಿಗಳಿ, ಜಿ.ಬೇವಿನಹಳ್ಳಿ, ಹಳ್ಳಿಹಾಳು, ಹಳ್ಳಿಹಾಳು ಕ್ಯಾಂಪ್, ಕಂಬತ್ತಹಳ್ಳಿ, ಕೊಕ್ಕನೂರು, ಜಿ.ಟಿ.ಕಟ್ಟೆ, ಮೂಗಿನಗೊಂದಿ, ಹಿಂಡಸಘಟ್ಟಕ್ಯಾಂಪ್, ಹಿಂಡಸಘಟ್ಟ, ಗೋವಿನಹಾಳು, ಗೋವಿನಹಾಳು ಕ್ಯಾಂಪ್‌ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮತದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ತರುವ ಭರವಸೆ ನೀಡಿತ್ತು. ಅದರಂತೆ ಸರ್ಕಾರ ಬಂದ ತಕ್ಷಣ ಐದೂ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇಂದು ಹರಿಹರ ವಿಧಾನಸಭಾ ಕ್ಷೇತ್ರವೊಂದಕ್ಕೆ ಸುಮಾರು ₹168 ಕೋಟಿಯಷ್ಟು ಹಣವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು.

ಇನ್ನು ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ‘ಪಂಚನ್ಯಾಯ ಪಚ್ಚೀಸ್‌ ಗ್ಯಾರಂಟಿ’ ಭರವಸೆಗಳನ್ನು ನೀಡಲಾಗಿದೆ. ಯುವ ನ್ಯಾಯದಡಿ ಯುವಕರಿಗೆ ಉದ್ಯೋಗ, ಮಹಿಳಾ ನ್ಯಾಯದಡಿ ಪ್ರತಿ ಮಹಿಳೆಗೆ ₹1 ಲಕ್ಷ ರು., ರೈತ ನ್ಯಾಯದಡಿ ಸ್ವಾಮಿನಾಥನ್‌ ಆಯೋಗ ಜಾರಿ ಸೇರಿದಂತೆ ಹಲವು ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಅದರಂತೆ ನಾವುಗಳು ಜಾರಿಗೆ ತರುತ್ತೇವೆ ಎಂದರು.

ಈ ಸಂದರ್ಭ ಮಾಜಿ ಶಾಸಕ ಎಸ್.ರಾಮಪ್ಪ, ಹರಿಹರ ವಿಧಾನಸಭಾ ಅಭ್ಯರ್ಥಿ ಶ್ರೀನಿವಾಸ್ ನಂದಿಗಾವಿ, ಚಿತ್ರದುರ್ಗ ಜಿಲ್ಲಾ ಪರಿಷತ್ತು ಮಾಜಿ ಅಧ್ಯಕ್ಷ ಎಸ್.ಎಸ್. ಬಕ್ಕೇಶ್, ಜಿಪಂ ಮಾಜಿ ಸದಸ್ಯ ವಾಗೀಶ್‌ ಸ್ವಾಮಿ, ಹರಿಹರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಮಲೇಬೆನ್ನೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಹಬೀದ್ ಅಲಿ, ಕುಣೆಬೆಳಕೆರೆ ವಿರೂಪಾಕ್ಷಪ್ಪ, ಕುಣೆಬೆಳಕೆರೆ ಬಸವರಾಜಪ್ಪ, ಹಾಲೇಶ ಗೌಡ, ಮೇಕಾ ಮುರುಳಿಕೃಷ್ಣ, ಸಪ್ತಗಿರಿ ರಾಮಮೂರ್ತಿ, ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

- - - -22ಕೆಡಿವಿಜಿ52, 53ಃ:

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಹರಿಹರ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚಿಸಿದರು.