ಮಹಾಲಕ್ಷ್ಮೀ ಕೋ ಬ್ಯಾಂಕಿಗೆ ೧೭.೫೦ ಕೋ. ರು. ಲಾಭ: ಯಶ್ಪಾಲ್ ಸುವರ್ಣ

| Published : Apr 06 2024, 12:45 AM IST

ಮಹಾಲಕ್ಷ್ಮೀ ಕೋ ಬ್ಯಾಂಕಿಗೆ ೧೭.೫೦ ಕೋ. ರು. ಲಾಭ: ಯಶ್ಪಾಲ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳನ್ನು ಹೊಂದಿದ್ದು, ೪೦,೦೦೦ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಕರಾವಳಿಯ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ೨೦೨೩-೨೪ನೇ ಸಾಲಿನಲ್ಲಿ ೯೨೧ ಕೋಟಿ ರು. ವ್ಯವಹಾರ ನಡೆಸಿ ೧೭.೫೦ ಕೋಟಿ ರು. ಲಾಭ ದಾಖಲಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಶಾಸಕ ಯಶ್ಪಾಲ್‌ ಎ. ಸುವರ್ಣ ತಿಳಿಸಿದ್ದಾರೆ.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳನ್ನು ಹೊಂದಿದ್ದು, ೪೦,೦೦೦ ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ ೨೦೨೩-೨೪ನೇ ಸಾಲಿನಲ್ಲಿ ೫೩೨ ಕೋಟಿ ರು. ಠೇವಣಿ, ೩೮೯ ಕೋಟಿ ರು. ಮುಂಗಡ, ೩೪ ಕೋಟಿ ರು. ಪಾಲು ಬಂಡವಾಳದೊಂದಿಗೆ, ಶೂನ್ಯ ಅನುತ್ಪಾದಕ ಸಾಲದ ಪ್ರಮಾಣದೊಂದಿಗೆ ಉತ್ತಮ ಪ್ರಗತಿ ಸಾಧಿಸಿದೆ.

ಕಳೆದ ೧೪ ವರ್ಷಗಳಿಂದ ನಿರಂತರವಾಗಿ ಸದಸ್ಯ ಗ್ರಾಹಕರಿಗೆ ಅತೀ ಹೆಚ್ಚು ಡಿವಿಡೆಂಡ್ ನೀಡುವ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಯಾಂಕ್, ಶಾಸನಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಪಡೆದಿದೆ.

ಪ್ರಸ್ತುತ ಬ್ಯಾಂಕಿನ ವ್ಯವಹಾರ ಕ್ಷೇತ್ರವನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ ಜಿಲ್ಲೆಯನ್ನು ಒಳಗೊಂಡಿರುತ್ತದೆ. ಮುಂಬರುವ ದಿನಗಳಲ್ಲಿ ಕರ್ನಾಟಕದಾದ್ಯಂತ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ವಿಸ್ತರಿಸಿ ಹೊಸ ಶಾಖೆಯನ್ನು ಆರಂಭಿಸಲಿದೆ.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಹಕರಿಸಿದ ಸರ್ವರಿಗೂ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಬ್ಯಾಂಕಿನ ಪ್ರಗತಿಗೆ ಸರ್ವರ ಸಲಹೆ ಸಹಕಾರವನ್ನು ಯಾಚಿಸುವುದಾಗಿ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬ್ಯಾಂಕ್

ಬ್ಯಾಂಕಿನ ಪ್ರಗತಿಯನ್ನು ಗುರುತಿಸಿ ರಾಜ್ಯ ಸಹಕಾರ ಮಹಾಮಂಡಲದಿಂದ ‘ಉಡುಪಿ ಜಿಲ್ಲೆಯ ಉತ್ತಮ ಪಟ್ಟಣ ಸಹಕಾರಿ ಬ್ಯಾಂಕ್’ ಪ್ರಶಸ್ತಿ, ನ್ಯಾಷನಲ್ ಫೆಡರೇಶನ್ ಆಫ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ಸ್ ಆ್ಯಂಡ್ ಕ್ರೆಡಿಟ್ ಸೊಸೈಟಿಯಿಂದ ರಾಷ್ಟ್ರಮಟ್ಟದ ‘ಬೆಸ್ಟ್ ಇನ್‌ವೆಸ್ಟ್‌ಮೆಂಟ್‌ ಇನೀಶಿಯೇಟಿವ್ ಅವಾರ್ಡ್’ ಹಾಗೂ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ ‘ಬ್ಯಾಂಕೊ ಬ್ಲೂ ರಿಬ್ಬನ್- ೨೦೨೩’ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.