ಸಾರಾಂಶ
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀ ದೇವಿಕಾ ಸುಬ್ಬರಾವ ಫೌಂಡೇಶನ್ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ ಫೌಂಡೇಶನ್ ಮುಖ್ಯಸ್ಥೆ ಪಲ್ಲವಿ ನಾಡಗೌಡ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀ ದೇವಿಕಾ ಸುಬ್ಬರಾವ ಫೌಂಡೇಶನ್ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ ಫೌಂಡೇಶನ್ ಮುಖ್ಯಸ್ಥೆ ಪಲ್ಲವಿ ನಾಡಗೌಡ ಹೇಳಿದ್ದಾರೆ.ನಮ್ಮ ತಂದೆಯವರಾದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರ ನಮ್ಮ ಮತಕ್ಷೇತ್ರದ ಯುವಕರಿಗೆ ಉದ್ಯೋಗ ಒದಗಿಸಬೇಕೆಂಬ ಸಾಮಾಜಿಕ ಕಳಕಳಿಯ ಜವಾಬ್ದಾರಿಯನ್ನು ಹೊತ್ತು ಅವರ ಮಾರ್ಗದರ್ಶನ, ಸಲಹೆ ಸೂಚನೆ ಆಶೀರ್ವಾದದೊಂದಿಗೆ ನಮ್ಮ ಸಂಸ್ಥೆಯಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ನಮ್ಮ ಮತಕ್ಷೇತ್ರದ ಸಾವಿರಾರು ಯುವಕರು ಬೇರೆ ಬೇರೆ ಉದ್ಯೋಗ ಮಾಡಿಕೊಂಡು ಜೀವನ ನಡೆಸಿಕೊಂಡು ಹೋಗುತ್ತಿದ್ದರು. ಆದರೆ, ಕೊರೋನಾ ವೇಳೆ ಬಹಳಷ್ಟು ಜನರ ಉದ್ಯೋಗಗಳು ಹೋಗಿವೆ. ಹೀಗಾಗಿ ಹಲವರು ಉದ್ಯೋಗ ವಂಚಿತರಾಗಿ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ಸ್ವಂತ ಕಾಲ ಮೇಲೆ ನಿಲ್ಲಲು ಮೊದಲ ಬಾರಿಗೆ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಮೇಳದಲ್ಲಿ ವಿವಿಧ ಭಾಗಗಳಿಂದ ನೂರಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಇದು ಶರಣರ ನಾಡು, ಬಸವಣ್ಣನವರು ಹೇಳಿರುವ ಕಾಯಕವೇ ಕೈಲಾಸ ಎಂಬಂತೆ ಪ್ರತಿಯೊಬ್ಬರು ದುಡಿಯಬೇಕು. ದುಡಿಯುವ ಕೈಗೆ ಕೆಲಸ ಕೊಡಬೇಕು. ನಮ್ಮ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವ ದೊಡ್ಡ ಜವಾಬ್ದಾರಿ ಸಮಾಜದ ಮೇಲಿದೆ. ಅನ್ನ, ಬಟ್ಟೆ ಮತ್ತು ವಸತಿಯಷ್ಟೇ ಉದ್ಯೋಗವು ಇಂದಿನ ದಿನಗಳಲ್ಲಿ ಯುವಕರಿಗೆ ಅತ್ಯವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳದ ಸದುಪಯೋಗವನ್ನು ನಿರುದ್ಯೋಗ ಯುವಕ, ಯುವತಿಯರು ಪಡೆದುಕೊಳ್ಳಬೇಕು.
-ಪಲ್ಲವಿ ನಾಡಗೌಡ, ದೇವಿಕಾ ಸುಬ್ಬರಾವ ಫೌಂಡೇಶನ್ ಮುಖ್ಯಸ್ಥೆ.