ದೊಡ್ಡಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಗಡುವು ನೀಡಿದರು
ದೊಡ್ಡಬಳ್ಳಾಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಗಡುವು ನೀಡಿದರು.
ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಸೇರಿದಂತೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗೆ, ನಿವೇಶನ ರಹಿತರಿಗೆ ಸೈಟ್ ಹಂಚಿಕೆ ಮಾಡಬೇಕು. ಸರ್ಕಾರ ಬಂದು ಮೂರು ವರ್ಷ ಪೂರೈಸಿದೆ. ಬಡವರಿಗೆ ನಿವೇಶನ, ವಸತಿ ಕಲ್ಪಿಸುವುದು ನಮ್ಮ ಜವಾಬ್ದಾರಿ ಆಗಿದೆ. ನಿವೇಶನ ಹಕ್ಕುಪತ್ರ ವಿತರಣೆ ವಿಳಂಬ ಆಗಬಾರದು ಎಂದ ಅವರು, ಈಗಾಗಲೇ ಎಲ್ಲೆಲ್ಲಿ ಸೈಟ್ ಅಭಿವೃದ್ಧಿ ಪಡಿಸಲಾಗಿದೆ ಅವುಗಳಿಗೆ ಫಲಾನುಭವಿಗಳ ಆಯ್ಕೆ ಹಾಗೂ ಹಕ್ಕುಪತ್ರ ಸಿದ್ದ ಮಾಡಿ. ನಿವೇಶನ ಅಭಿವೃದ್ಧಿ ಪಡಿಸುತ್ತಿರುವ ಜಾಗಗಳಲ್ಲಿ ಎಲ್ಲೆಲ್ಲಿ ತಕರಾರು, ಅಡಚಣೆ ಇದೆ ಅಲ್ಲಿಗೆ ತಹಶೀಲ್ದಾರ್, ಇಒ, ಸರ್ವೇಯರ್, ಆರ್.ಐಗಳು, ಸ್ಥಳೀಯ ಮುಖಂಡರು ಖುದ್ದು ಭೇಟಿ ನೀಡಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಅರ್ಹ ಫಲಾನುಭವಿಗಳಿಗೆ ಪಕ್ಷಾತೀತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಮೇ.15 ರೊಳಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಸಾವಿರ ನಿವೇಶನಗಳು ಸಿದ್ದ ಇರಬೇಕು. ಇದು ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಜವಾಬ್ದಾರಿ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಅಧ್ಯಕ್ಷ ಜಗನ್ನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.ಬಾಕ್ಸ್;;
ಕುಡಿಯುವ ನೀರು ಸಮಸ್ಯೆ ತ್ವರಿತ ಪರಿಹಾರ ಒದಗಿಸಲು ಸಚಿವರ ಸೂಚನೆದೊಡ್ಡಬಳ್ಳಾಪುರ: ಬೇಸಿಗೆ ತೀವ್ರವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮ ಅಥವಾ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಕುಡಿಯುವ ನೀರು ಸಮಸ್ಯೆ ಉಲ್ಬಣವಾಗಿದೆ. ಅಲ್ಲಿ ಪರ್ಯಾಯವಾಗಿ ಖಾಸಗಿ ಬೋರ್‌ವೆಲ್, ರೈತರ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಕೆ ಮಾಡಬೇಕು. ಯಾವುದೇ ಗ್ರಾಮ, ನಗರ ವ್ಯಾಪ್ತಿಯಲ್ಲಿ ಕುಡಿಯಲು ನೀರಿಲ್ಲ ಎಂದು ವರದಿ ಬರಬಾರದು. ಪಂಚಾಯಿತಿ ಪಿಡಿಒಗಳು ಬೆಳಿಗ್ಗೆ ಇಂದ ಸಂಜೆ ತನಕ ಕೇಂದ್ರ ಸ್ಥಾನದಲ್ಲಿ ಇದ್ದು, ಕುಡಿಯುವ ನೀರು ಸಮಸ್ಯೆ ನಿರ್ವಹಣೆ ಮಾಡಬೇಕು. ಈಗಾಗಲೇ ಕುಡಿಯುವ ನೀರು ಸಮಸ್ಯೆ ಇರುವ ಜಾಗಗಳಲ್ಲಿ ಶೀಘ್ರ ಹೊಸ ಕೊಳವೆಬಾವಿಗಳನ್ನು ಕೊರೆಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೈಕೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದರು.ಫೋಟೋ-
30ಕೆಡಿಬಿಪಿ5- ಬೆಂ.ಗ್ರಾ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಶ್ರಯ ಯೋಜನೆಯಡಿ ನಿವೇಶನ ಹಕ್ಕುಪತ್ರ ನೀಡುವ ಸಂಬಂಧ ಪೂರ್ವಭಾವಿ ಸಭೆ ನಡೆಯಿತು.