ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು ಹುಂಡಿ ಹಣ ಸಂಗ್ರಹವಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಸ್ ನಿಲ್ದಾಣದ ಬಳಿ ಬರುವ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಯಲ್ಲಿದ್ದ ಹಣವನ್ನು ತೆರೆದು ಸಿಸಿಟಿವಿ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಯಿತು. ಮಲೆ ಮಾದೇಶ್ವರ ಬೆಟ್ಟ ಹುಂಡಿಯಲ್ಲಿ 30 ದಿನದಲ್ಲಿ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗಿರುವ ಹಿನ್ನೆಲೆಯಲ್ಲಿ ಜೊತೆಗೆ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಶಕ್ತಿ ಯೋಜನೆಯಿಂದ ಮಹಿಳೆಯರು ಮಲೆ ಮಾದೇಶ್ವರ ಬೆಟ್ಟಕ್ಕೆ ಹೆಚ್ಚಾಗಿ ಭೇಟಿ ನೀಡಿದ ಹಿನ್ನೆಲೆಯಲ್ಲಿ 2,20,97,533 ನಗದು ಹಾಗೂ 106 ಗ್ರಾ ಚಿನ್ನ , 2,100 ಕೆಜಿ ಬೆಳ್ಳಿ, ವಿದೇಶಿಯ ನೋಟುಗಳು ಮತ್ತು ಡಾಲರ್ ಸಹ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾಗಿದ್ದು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 19 ನೋಟುಗಳನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ. ಇದೇ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಹಾಗೂ ಉಪ ಕಾರ್ಯದರ್ಶಿ ಚಂದ್ರಶೇಖರ್ ಲೆಕ್ಕಅಧೀಕ್ಷಕ ನಾಗೇಶ್, ಸರಗೂರು ಮಹದೇವ ಸ್ವಾಮಿ ಹಾಗೂ ಬ್ಯಾಂಕ್ ಆಫ್ ಬರೋಡ ಅಧಿಕಾರಿ ಸಿಬ್ಬಂದಿರು ವರ್ಗದವರು ಮತ್ತು ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ವರ್ಗ ಹುಂಡಿ ಎಣಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯಕ್ರಮದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.