ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2.58 ಕೋಟಿ ರು. ಸಂಗ್ರಹ

| Published : May 31 2024, 02:16 AM IST

ಸಾರಾಂಶ

ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಬುಧವಾರ ನಡೆದ ಹುಂಡಿ ಎಣಿಕೆಯಲ್ಲಿ ಕಾರ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಬೆಳಗ್ಗೆಯಿಂದ ರಾತ್ರಿ 9ರವರೆಗೆ ಎಣಿಕೆ ಕಾರ್ಯ ನಡೆಯಿತು.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಬುಧವಾರ ನಡೆದ ಹುಂಡಿ ಎಣಿಕೆಯಲ್ಲಿ ಕಾರ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಬೆಳಗ್ಗೆಯಿಂದ ರಾತ್ರಿ 9ರವರೆಗೆ ಎಣಿಕೆ ಕಾರ್ಯ ನಡೆಯಿತು.ಕಳೆದ ಒಂದುವರೆ ತಿಂಗಳಿನಿಂದ ಶಾಲಾ ಕಾಲೇಜು ರಜೆ ಇದ್ದ ಕಾರಣ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಕ್ತಿ ಯೋಜನೆಯ ಅಪಾರ ಸಂಖ್ಯೆಯ ಮಹಿಳೆಯರು ಸೇರಿದಂತೆ ಮಾದೇಶ್ವರ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಹರಕೆ ರೂಪದಲ್ಲಿ ಹುಂಡಿಗೆ ಹಾಕಿದಂತಹ ಹಣ 2,58,44,097 ನಗದು ಸಂಗ್ರಹವಾಗಿದೆ. 93 ಗ್ರಾಂ ಚಿನ್ನ 3,350 ಬೆಳ್ಳಿ ಪದಾರ್ಥಗಳನ್ನು ಭಕ್ತಾದಿಗಳು ಹುಂಡಿಯಲ್ಲಿ ಹಾಕಿದ್ದಾರೆ. ಜೊತೆಗೆ ಚಲಾವಣೆಯಲ್ಲಿ ಇಲ್ಲದ ರು.2000 ನೋಟು 25, ಜಪಾನ್, ನೇಪಾಳ, ಸೌದಿ, ಅರೇಬಿಯಾ, ಕತಾರ್‌ ದೇಶಗಳ ನಾಲ್ಕು ನೋಟುಗಳನ್ನು ಸಹ ಮಾದಪ್ಪನ ಭಕ್ತಾದಿಗಳು ಹುಂಡಿಯಲ್ಲಿ ಹಾಕಿದ್ದಾರೆ. 30 ದಿನದಲ್ಲಿ ದಾಖಲೆ ಮಟ್ಟದ ಹಣ ಸಂಗ್ರಹವಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ಸಿಬ್ಬಂದಿ ವರ್ಗ, ಮಲೆ ಮಾದೇಶ್ವರ ಬೆಟ್ಟದ ನೌಕರರು ಉಪಸ್ಥಿತರಿದ್ದರು.