ಮತ್ತಾವು ಸೇತುವೆ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ: ಸುನಿಲ್‌ಕುಮಾರ್‌

| Published : Apr 09 2025, 12:34 AM IST

ಮತ್ತಾವು ಸೇತುವೆ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ: ಸುನಿಲ್‌ಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮತ್ತಾವು ಪ್ರದೇಶದ ನಿವಾಸಿಗಳು ಮಳೆಗಾಲದಲ್ಲಿ ಸಂದರ್ಭದಲ್ಲಿ ಕಾಡಿನ ಮಧ್ಯ ಹರಿಯುವ ನದಿಯನ್ನು ದಾಟಲು ತುಂಬಾ ಅಪಾಯಕಾರಿಯಾದ ಕಾಲುಸಂಕ ದಾರಿ ಅವಲಂಬಿಸಬೇಕಾಗಿದೆ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸೇತುವೆ ಸಹಿತ ರಸ್ತೆ ಅಭಿವೃದ್ಧಿ ಅವಶ್ಯಕವಾಗಿತ್ತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ಬಹು ದಿನಗಳ ಬೇಡಿಕೆಯಾಗಿದ್ದ ಹಾಗೂ ವಿವಿಧ ಕಾರಣಗಳಿಂದಾಗಿ ಬಾಕಿ ಇದ್ದಂ ಕಬ್ಬಿನಾಲೆ ಗ್ರಾಮದ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಮಲೆಕುಡಿಯ ಕಾಲನಿ ಮತ್ತಾವು ಸಂಪರ್ಕಿಸುವ ಸೇತುವೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರು. 2 ಕೋಟಿ ಅನುದಾನ ಮಂಜೂರಾಗಿಗೆ ಎಂದು ಕಾರ್ಕಳ ಶಾಸಕ ವಿ.ಸುನಿಲ್‌ಕುಮಾರ್‌ ತಿಳಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮತ್ತಾವು ಪ್ರದೇಶದ ನಿವಾಸಿಗಳು ಮಳೆಗಾಲದಲ್ಲಿ ಸಂದರ್ಭದಲ್ಲಿ ಕಾಡಿನ ಮಧ್ಯ ಹರಿಯುವ ನದಿಯನ್ನು ದಾಟಲು ತುಂಬಾ ಅಪಾಯಕಾರಿಯಾದ ಕಾಲುಸಂಕ ದಾರಿ ಅವಲಂಬಿಸಬೇಕಾಗಿದೆ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸೇತುವೆ ಸಹಿತ ರಸ್ತೆ ಅಭಿವೃದ್ಧಿ ಅವಶ್ಯಕವಾಗಿತ್ತು. ಈ ನಿಟ್ಟಿನಲ್ಲಿ ಮತ್ತಾವು ಕಾಲನಿ ಸಂಪರ್ಕಕ್ಕಾಗಿ ಸರ್ಕಾರದಿಂದ ಅನುದಾನ ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ. ಈ ಸೇತುವೆ ನಿರ್ಮಾಣದಿಂದಾಗಿ ಮಲೆಕುಡಿಯ ಸಮುದಾಯದವರ ಸುಗಮ ಸಂಚಾರಕ್ಕೆ ತುಂಬಾ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಮಗಾರಿ ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಚೇರಿ ಪ್ರಕಟಣೆ ತಿಳಿಸಿದೆ....................ಈ ರಸ್ತೆ ಸೇತುವೆ ಐದು ದಶಕಗಳ ಬೇಡಿಕೆಯಾಗಿದ್ದು, ಮಲೆಕುಡಿಯ ಸಂಘದ ನಿರಂತರ ಹಕ್ಕೋತ್ತಾಯಕ್ಕೆ ಸಂದ ಜಯವಾಗಿದೆ. ಕಾಮಗಾರಿ ನಿಗದಿತ ಅವಧಿಯಲ್ಲಿ ಪ್ರಾರಂಭ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇವೆ‌.

-ಗಂಗಾಧರ ಗೌಡ, ಜಿಲ್ಲಾ ಮಲೆಕುಡಿಯ ಸಂಘ ಅಧ್ಯಕ್ಷ.