ಚಿಕ್ಕಮಗಳೂರುಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಸಣ್ಣಪುಟ್ಟ ನ್ಯೂನತೆ ಸರಿಪಡಿಸಲು ಹಾಗೂ ತುರ್ತು ಅಗತ್ಯ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ ₹2 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ, ಪರಿಶೀಲನೆ । ಅಗತ್ಯ ಕಾಮಗಾರಿ ಕೈಗೊಂಡು ಉತ್ತಮ ಆರೋಗ್ಯ ಸೇವೆ ಒದಗಿಸಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಸಣ್ಣಪುಟ್ಟ ನ್ಯೂನತೆ ಸರಿಪಡಿಸಲು ಹಾಗೂ ತುರ್ತು ಅಗತ್ಯ ಕಾಮಗಾರಿ ಕೈಗೊಳ್ಳಲು ರಾಜ್ಯ ಸರ್ಕಾರ ₹2 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.ಗುರುವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ ಹಾಗೂ ವೈದ್ಯಕೀಯ ಸೌಲಭ್ಯ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆಯಾಗಿದೆ. ಯಾವ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂಬುದನ್ನು ಗುರುತಿಸಲು ಎಂಜಿನಿಯರ್‌ಗಳಿಂದ ಪರಿಶೀಲಿಸಲಾಗಿದೆ. ಅಗತ್ಯ ಕಾಮಗಾರಿ ಕೈಗೊಂಡು ಉತ್ತಮ ಆರೋಗ್ಯ ಸೇವೆ ಒದಗಿಸ ಲಾಗುವುದು ಎಂದರು.

ಜಿಲ್ಲಾಧಿಕಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರು, ವೈದ್ಯಕೀಯ ಕಾಲೇಜಿನ ಡೀನ್, ವೈದ್ಯರು ಹಾಗೂ ಆರ್‌ಎಂ ಅವರೊಂದಿಗೆ ಪ್ರತಿಯೊಂದು ವಿಭಾಗ ಪರಿಶೀಲಿಸಲಾಗಿದೆ. ಹೊಸ ಹೊರರೋಗಿ ವಿಭಾಗ ಮತ್ತು ತುರ್ತು ಚಿಕಿತ್ಸಾ ಘಟಕದಲ್ಲಿ ಪ್ರಮುಖ ಸಮಸ್ಯೆಗಳಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಏಕಕಾಲಕ್ಕೆ ಬಂದಾಗ ಉಂಟಾಗುವ ಒತ್ತಡ ನಿರ್ವಹಿಸಲು ಕ್ರಮ ಕೈ ಗೊಳ್ಳು ವಂತೆ ಸೂಚಿಸಲಾಗಿದೆ. ಐಸಿಯುನಲ್ಲಿ ಆರು ವೆಂಟಿಲೇಟರ್‌ಗಳು ಸಿದ್ಧವಿದ್ದು, ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಈ ಹಿಂದೆ ಇಲ್ಲದ ಎಂಡೋಸ್ಕೋಪಿ ಯಂತ್ರವನ್ನು ₹65 ಲಕ್ಷ ವೆಚ್ಚದಲ್ಲಿ ಖರೀದಿಸಿ ಒಂದು ತಿಂಗಳಿನಿಂದ ಅಳವಡಿಸಲಾಗಿದೆ. ಹೊಟ್ಟೆನೋವು, ಗ್ಯಾಸ್ಟ್ರಿಕ್ ಸೇರಿದಂತೆ ಸಂಬಂಧಿತ ಸಮಸ್ಯೆಗಳಿಗೆ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನೂತನ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಹೃದ್ರೋಗ, ಕ್ಯಾನ್ಸರ್ ಸೇರಿದಂತೆ ಸೂಪರ್ ಸ್ಪೆಷಾಲಿಟಿ ಸೇವೆಗಳಿಗೆ ಅಗತ್ಯ ವೈದ್ಯರ ನೇಮಕ ಹಾಗೂ ಉಪಕರಣ ಖರೀದಿಗಾಗಿ ₹22 ಕೋಟಿ ಮೊತ್ತದ ಟೆಂಡರ್ ಆರಂಭಿಸಲಾಗಿದೆ. ಸೌಲಭ್ಯ ಪೂರ್ಣಗೊಂಡ ಬಳಿಕ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರನ್ನು ಆಹ್ವಾನಿಸಿ ಆಸ್ಪತ್ರೆ ಉದ್ಘಾಟಿಸಲಾಗುವುದು.ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಬಲವಂತದ ಸಿಸೇರಿಯನ್ ಆರೋಪದ ಕುರಿತು ಪರಿಶೀಲಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ.90ರಷ್ಟಿರುವ ಸಿಸೇರಿಯನ್ ಪ್ರಮಾಣ ಸರ್ಕಾರಿ ಆಸ್ಪತ್ರೆಯಲ್ಲಿ ಶೇ.51ರಷ್ಟಿದೆ. ಸಹಜ ಹೆರಿಗೆಗೆ ಆದ್ಯತೆ ನೀಡಲು ಸೂಚಿಸ ಲಾಗಿದೆ. ಕಳೆದ ತಿಂಗಳಿನಲ್ಲಿ 328 ಸಹಜ ಹೆರಿಗೆಗಳಾಗಿವೆ.ರಕ್ತ ಪರೀಕ್ಷೆಯ ವರದಿಗಾಗಿ ರೋಗಿಗಳು ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿಸಲು ಮೊಬೈಲ್‌ಗೆ ವರದಿ ಕಳುಹಿಸುವ ವ್ಯವಸ್ಥೆ ಮುಂದಿನ ಒಂದು ತಿಂಗಳೊಳಗೆ ಜಾರಿಗೊಳಿಸಲಾಗುವುದು. ಸ್ತನ ಕ್ಯಾನ್ಸರ್ ಆರಂಭಿಕ ಪತ್ತೆಗೆ ಅಗತ್ಯ ಪರೀಕ್ಷೆ ಗಳನ್ನು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಯಂತ್ರದ ಮೂಲಕ ನಡೆಸಲಾಗುತ್ತಿದೆ.ಸೂಪರ್ ಸ್ಪೆಷಾಲಿಟಿ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಗಳು ಆರಂಭವಾದರೂ ಮಲ್ಲೇಗೌಡ ಆಸ್ಪತ್ರೆ ತುರ್ತು ಚಿಕಿತ್ಸೆ ಮತ್ತು ಇತರ ವೈದ್ಯಕೀಯ ಸೇವೆಗಳು ಮುಂದುವರಿಯಲಿವೆ. ಬಡ ಮತ್ತು ಮಧ್ಯಮ ವರ್ಗದವರಿಗೆ ಗುಣಮಟ್ಟದ ಚಿಕಿತ್ಸೆ ಒದಗಿಸು ವುದು ಸರ್ಕಾರದ ಆದ್ಯತೆಯಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಹಾಗೂ ಜಿಲ್ಲಾಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.