ನಗರದ ಪ್ರತಿಷ್ಠಿತ ಯು.ಬಿ.ಸಿಟಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ 21 ಸ್ವತ್ತುಗಳಿಂದ 2.65 ಕೋಟಿ ರು. ತೆರಿಗೆಯನ್ನು ಕೇಂದ್ರ ನಗರ ಪಾಲಿಕೆ ವಸೂಲಿ ಮಾಡಿದೆ.

-ಕೇಂದ್ರ ನಗರ ಪಾಲಿಕೆ ಆಯುಕ್ತ: ಜಗದೀಶ್‌

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದ ಪ್ರತಿಷ್ಠಿತ ಯು.ಬಿ.ಸಿಟಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ 21 ಸ್ವತ್ತುಗಳಿಂದ 2.65 ಕೋಟಿ ರು. ತೆರಿಗೆಯನ್ನು ಕೇಂದ್ರ ನಗರ ಪಾಲಿಕೆ ವಸೂಲಿ ಮಾಡಿದೆ.

ಸ್ವತ್ತಿನ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯ ಇರುವ ಹಿನ್ನೆಲೆಯಲ್ಲಿ ಯು.ಬಿ. ಸಿಟಿಯ ಒಡೆತನ ಹೊಂದಿದ್ದ ಯುನೈಟೆಡ್ ಬ್ರೀವರೀಸ್ ಹೋಲ್ಡಿಂಗ್ ಲಿಮಿಟೆಡ್‌ಗೆ ಕರ್ನಾಟಕ ಹೈಕೋರ್ಟ್‌ ನೇಮಿಸಿರುವ ಕಂಪನಿ ಸಮಾಪನಾಧಿಕಾರಿಯವರು (ಆಫೀಷಿಯಲ್ ಲಿಕ್ವಿಡೇಟರ್) 2.65 ಕೋಟಿ ರು.ಯ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಕೇಂದ್ರ ನಗರ ಪಾಲಿಕೆ ಆಯುಕ್ತ ಜಿ.ಜಗದೀಶ್ ಅವರಿಗೆ ಹಸ್ತಾಂತರಿಸಿದರು.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳನ್ನು ಗುರುತಿಸಿ, ಬಾಕಿದಾರರಿಗೆ ಡಿಮ್ಯಾಂಡ್ ನೋಟಿಸ್ ಜಾರಿಗೊಳಿಸುವಂತೆ ಹಾಗೂ ಬಾಕಿ ತೆರಿಗೆಯನ್ನು ಆದ್ಯತೆಯ ಮೇರೆಗೆ ವಸೂಲಿ ಮಾಡುವಂತೆ ಆದೇಶ ನೀಡಲಾಗಿದೆ. ಅದರಂತೆ ಬಾಕಿ ತೆರಿಗೆ ವಸೂಲಾತಿ ಕಾರ್ಯವನ್ನು ಚುರುಕುಗೊಳಿಸಿದ್ದು, ಬಾಕಿದಾರರಿಗೆ ಡಿಮ್ಯಾಂಡ್ ನೋಟಿಸ್ ಜಾರಿಗೊಳಿಸುವುದರ ಜೊತೆಗೆ ತೆರಿಗೆ ವಸೂಲಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆಸ್ತಿ ಮಾಲೀಕರು ಕೂಡಲೇ ತಮ್ಮ ಬಾಕಿ ತೆರಿಗೆ ಮೊತ್ತವನ್ನು ಪಾವತಿಸಬೇಕು. ವಿಳಂಬ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತ ಜಿ.ಜಗದೀಶ್ ತಿಳಿಸಿದ್ದಾರೆ.