ಇಂದಿನಿಂದ 2 ದಿನ ರಾಜ್ಯಮಟ್ಟಪುರುಷರ ಕಬಡ್ಡಿ ಪಂದ್ಯಾವಳಿ

| Published : Nov 23 2024, 12:33 AM IST

ಇಂದಿನಿಂದ 2 ದಿನ ರಾಜ್ಯಮಟ್ಟಪುರುಷರ ಕಬಡ್ಡಿ ಪಂದ್ಯಾವಳಿ
Share this Article
  • FB
  • TW
  • Linkdin
  • Email

ಸಾರಾಂಶ

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ನ.23 ಮತ್ತು 24 ರಂದು ಎರಡು ದಿನಗಳ ಕಾಲ ಸಿಂಧನೂರು ನಗರದ ಸತ್ಯಗಾರ್ಡನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಲಬೀದ್ ಶಾಫೀ ತಿಳಿಸಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ನ.23 ಮತ್ತು 24 ರಂದು ಎರಡು ದಿನಗಳ ಕಾಲ ಸಿಂಧನೂರು ನಗರದ ಸತ್ಯಗಾರ್ಡನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಲಬೀದ್ ಶಾಫೀ ತಿಳಿಸಿದರು.ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈಗಾಗಲೇ ರಾಯಚೂರು ಜಿಲ್ಲೆಗಳಿಂದ 11 ತಂಡಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 25 ತಂಡಗಳು ಹೆಸರು ನೋಂದಾಯಿಸಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕಲ್ಪಿಸಲಾಗಿದೆ. ಕಬಡ್ಡಿ ಅಸೋಸಿಯೇಷನ್‌ನ ರೆಫರಿಗಳೇ ಪಂದ್ಯಾವಳಿ ನಡೆಸಿಕೊಡಲಿದ್ದಾರೆ. ಪಂದ್ಯಾವಳಿಯಲ್ಲಿ ವಿಜೇತ ರಾದವರಿಗೆ ಪ್ರಥಮ ಬಹುಮಾನ 50 ಸಾವಿರ ರು. ಮತ್ತು ಟ್ರೋಫಿ, ದ್ವಿತೀಯ ಬಹುಮನ 30 ಸಾವಿರ ರು., ತೃತೀಯ ಬಹುಮಾನ 10 ಸಾವಿರ ರು. ಹಾಗೂ ಭಾಗವಹಿಸಿದ ಎಲ್ಲ ತಂಡಗಳಿಗೂ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ಹೇಳಿದರು.ನ.23 ರಂದು ಬೆಳಿಗ್ಗೆ 9.30 ಗಂಟೆಗೆ ಸತ್ಯಗಾರ್ಡನ್‌ನಲ್ಲಿ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಜಮಾತೆ ಇಸ್ಲಾಮಿ ಹಿಂದ್ ರಾಜ್ಯ ಘಟಕದ ಕಾರ್ಯದರ್ಶಿ ಅಕ್ಬರ್‌ ಅಲಿ ಉಡುಪಿ ಉದ್ಘಾಟಿಸುವರು. ಸಂಸದರು, ಶಾಸಕರು ಸೇರಿದಂತೆ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖಂಡರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.ನ.24 ರಂದು ಮಧ್ಯಾಹ್ನ 2.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಯದ್ದಲದೊಡ್ಡಿ ಮಠದ ಮಹಾಲಿಂಗ ಮಹಾಸ್ವಾಮಿ ಸಾನಿಧ್ಯ ವಹಿಸುವರು. ಸಚಿವರು, ಮುಖಂಡರು ಮತ್ತಿತರರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.ಮೂವ್ಮೆಂಟ್ ರಾಜ್ಯ ಘಟಕದ ಕಾರ್ಯದರ್ಶಿಗಳಾದ ಅಬ್ದುಲ್ ಹಸೀಬ್ ತರಫ್ದಾರ್, ಇಸ್ಮಾಯಿಲ್ ತೀರ್ಥಹಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ ಡಾ.ವಸೀಮ್ ಅಹ್ಮದ್, ಸದಸ್ಯರದ ಸೈಯ್ಯದ್ ತನ್ವವೀರ್, ನೂರ್ ಅಹ್ಮದ್ ಇದ್ದರು.