ಸಾರಾಂಶ
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಧನುಷ್ ಡಿ.ಆರ್. ಹಾಗೂ ಸಾಯಿತೇಜ್ ಎನ್. ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕನ್ನಡಪ್ರಭ ವಾರ್ತೆ ಕೋಲಾರಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಮಿನಿ ಒಲಂಪಿಕ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ, 14 ವರ್ಷದ ಬಾಲಕರ ವಿಭಾಗದಲ್ಲಿ ಜಿಲ್ಲೆಯಿಂದ ಸ್ಪರ್ಧಿಸಿದ್ದ ಧನುಷ್ ಡಿ.ಆರ್. ಜಾವಲಿನ್ ಎಸೆತದಲ್ಲಿ ಬೆಳ್ಳಿ ಪದಕ ಹಾಗೂ ಸಾಯಿತೇಜ್ ಎನ್. ಡಿಸ್ಕಸ್ ಥ್ರೋ ಕಂಚಿನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ತಾಲೂಕಿನ ಕೆಂದಟ್ಟಿ ಗೇಟ್ ಸಮೀಪದ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆಯ ಶಾಲೆಯಲ್ಲಿ ಧನುಷ್ ಡಿ.ಆರ್ ಹಾಗೂ ಸಾಯಿ ತೇಜ್ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ತರಬೇತುದಾರ ಎಂ.ವೆಂಕಟೇಶ್ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ, ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್.ಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ, ಹಿರಿಯ ಕ್ರೀಡಾಪಟು ಎ.ಜಗನ್ನಾಥನ್, ಶ್ರೀ ಬಸವೇಶ್ವರ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಜಗದೀಶ್ ಅಭಿನಂದಿಸಿದ್ದಾರೆ.