ಹುಬ್ಬಳ್ಳಿ-ವಿಜಯಪುರ ನಡುವೆ 2 ಮಲ್ಟಿ ಆ್ಯಕ್ಸಲ್‌ ಎಸಿ ಬಸ್‌ ಸಂಚಾರ ಆರಂಭ

| Published : Feb 09 2024, 01:49 AM IST

ಹುಬ್ಬಳ್ಳಿ-ವಿಜಯಪುರ ನಡುವೆ 2 ಮಲ್ಟಿ ಆ್ಯಕ್ಸಲ್‌ ಎಸಿ ಬಸ್‌ ಸಂಚಾರ ಆರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಹುಬ್ಬಳ್ಳಿ ಹಾಗೂ ವಿಜಯಪುರ ನಡುವೆ 6 ಮಲ್ಟಿ ಆ್ಯಕ್ಸಲ್ ವೋಲ್ವೊ ಎಸಿ ಬಸ್ಸುಗಳ ಸಂಚಾರ ಆರಂಭಿಸಲಾಗಿತ್ತು. ಈ ಬಸ್ಸುಗಳಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಿತವ್ಯಯಕರ ಪ್ರಯಾಣ ದರದಲ್ಲಿ ಹವಾನಿಯಂತ್ರಣ ಸೌಲಭ್ಯ ದೊರೆಯುತ್ತಿರುವುದರಿಂದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲ

ಹುಬ್ಬಳ್ಳಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಹುಬ್ಬಳ್ಳಿ-ವಿಜಯಪುರ ನಡುವೆ ಮತ್ತೆ ಎರಡು ಮಲ್ಟಿ ಆ್ಯಕ್ಸಲ್ ಎಸಿ ಬಸ್ಸುಗಳ ಸಂಚಾರ ಆರಂಭಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಬೆಳಗಾವಿ ನಡುವೆ ನಿಯಮಿತವಾಗಿ ಪ್ರಯಾಣ ಮಾಡುವವರ ಅನುಕೂಲಕ್ಕಾಗಿ ಮಲ್ಟಿ ಆ್ಯಕ್ಸಲ್ ವೋಲ್ವೊ ಎಸಿ ಬಸ್ಸುಗಳ ಸಂಚರಿಸುತ್ತಿದ್ದು ಹೆಚ್ಚು ಜನಪ್ರಿಯವಾಗಿವೆ. ಅದೇ ಮಾದರಿಯಲ್ಲಿ ಹುಬ್ಬಳ್ಳಿಯಿಂದ ಪ್ರಮುಖ ನಗರಗಳ ನಡುವೆ ಮಲ್ಟಿ ಅ್ಯಕ್ಸಲ್ ವೋಲ್ವೊ ಎಸಿ ಬಸ್ಸುಗಳ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರಿಂದ ಬೇಡಿಕೆ ಬಂದಿತ್ತು.

ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಹುಬ್ಬಳ್ಳಿ ಹಾಗೂ ವಿಜಯಪುರ ನಡುವೆ 6 ಮಲ್ಟಿ ಆ್ಯಕ್ಸಲ್ ವೋಲ್ವೊ ಎಸಿ ಬಸ್ಸುಗಳ ಸಂಚಾರ ಆರಂಭಿಸಲಾಗಿತ್ತು. ಈ ಬಸ್ಸುಗಳಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಿತವ್ಯಯಕರ ಪ್ರಯಾಣ ದರದಲ್ಲಿ ಹವಾನಿಯಂತ್ರಣ ಸೌಲಭ್ಯ ದೊರೆಯುತ್ತಿರುವುದರಿಂದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಿದೆ. ಆದ್ದರಿಂದ ಮತ್ತಷ್ಟು ಬಸ್ಸು ಹೆಚ್ಚಿಸುವಂತೆ ಕೋರಿ ಹುಬ್ಬಳ್ಳಿ ಹಾಗೂ ವಿಜಯಪುರ ಭಾಗದ ಸಾರ್ವಜನಿಕರಿಂದ ನಿರಂತರ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈಗ ಮತ್ತೆ ಎರಡು ವೋಲ್ವೊ ಬಸ್ ಗಳ ಸಂಚಾರ ಆರಂಭಿಸಲಾಗಿದೆ.

ಬಸ್ ಸಮಯ: ಈ ಬಸ್‌ಗಳು ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಿಂದ ಹೊರಟು ಹೊಸೂರು ಬಸ್ ನಿಲ್ದಾಣದ ಮೂಲಕ ಸಂಚರಿಸುತ್ತವೆ. ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಬೆಳಗ್ಗೆ 6.20, 7.30, 8.15, 10.30, ಮಧ್ಯಾಹ್ನ 12.01, 1.30 ಸಂಜೆ 6.15 ಹಾಗೂ 6.45.

ವಿಜಯಪುರದಿಂದ ಹುಬ್ಬಳ್ಳಿಗೆ ಆಗಮಿಸುವ ಬಸ್‌ಗಳು ಕೇಂದ್ರ ಬಸ್ ನಿಲ್ದಾಣದಿಂದ ಹೊರಡುತ್ತವೆ. ಬೆಳಗ್ಗೆ 6.00, 11.10, ಮಧ್ಯಾಹ್ನ 12.45, 2.00, 3.45 ಸಂಜೆ 5.00, 7.10 ಹಾಗೂ ರಾತ್ರಿ11.15 ಹೊರಡಲಿವೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಹುಬ್ಬಳ್ಳಿಯಿಂದ ಮತ್ತಿತರ ಪ್ರಮುಖ ನಗರಗಳಿಗೆ ಮಲ್ಟಿ ಆ್ಯಕ್ಸಲ್ ಎಸಿ ಬಸ್ ಗಳ ಸಂಚಾರ ಆರಂಭಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ರಾಮನಗೌಡರ ಮಾಹಿತಿ ನೀಡಿದ್ದಾರೆ.