ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಎರಡು ವರ್ಷದ ಚಿರತೆ ಸೆರೆಯಾಗಿದೆ
ಕೊರಟಗೆರೆ: ಕಳೆದ ಕೆಲವು ದಿನಗಳಿಂದ ಕಾವಲುಬೀಳು ಗ್ರಾಮದ ನಿವಾಸಿಗಳ ನಿದ್ದೆ ಕೆಡಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಎರಡು ವರ್ಷದ ಚಿರತೆ ಸೆರೆಯಾಗಿದೆ. ಪಟ್ಟಣದ ೪ನೇ ವಾರ್ಡ್ ಕಾವಲುಬೀಳು ಗ್ರಾಮದ ನಿವಾಸಿ ರಮೇಶ್ ಎಂಬುವರ ಸಾಕು ನಾಯಿ ಮೇಲೆ ಮಂಗಳವಾರ ದಾಳಿ ನಡೆಸಿ ಜನರಲ್ಲಿ ಆತಂಕ ಉಂಟು ಮಾಡಿತ್ತು, ಸ್ಥಳೀಯ ರೈತರು ಭಯ ಭೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸೂಕ್ತ ಸ್ಥಳದಲ್ಲಿ ಬೋನ್ ಇಟ್ಟಿದ್ದರು. ಆಹಾರಕ್ಕಾಗಿ ಬಂದ ಚಿರತೆ ಬೋನಿಗೆ ತಡರಾತ್ರಿ ಬಿದ್ದಿದೆ. ವಿಷಯ ತಿಳಿದ ಕೂಡಲೇ ಡಿಆರ್‌ಎಫ್‌ಒ ದಿಲೀಪ್ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೋನಿಗೆ ಬಿದ್ದ ಚಿರತೆಯನ್ನು ಬೇರೆಡೆ ಸಾಗಿಸುವ ವ್ಯವಸ್ಥೆ ಮಾಡಿದರು.