ಸಾರಾಂಶ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಮಹಾರಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಮೀಪದ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ೨೦,೭೯೦ ಕ್ಯುಸೆಕ್ಸ್ ನೀರು ಹಿಪ್ಪರಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಜಲಾಶಯದಿಂದ ನೀರು ಭಾರಿ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಉತ್ತಮ ಪ್ರಮಾಣದ ನೀರು ಹರಿದು ಬಂದಿದೆ.
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ:
ಮಹಾರಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಮೀಪದ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ೨೦,೭೯೦ ಕ್ಯುಸೆಕ್ಸ್ ನೀರು ಹಿಪ್ಪರಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಜಲಾಶಯದಿಂದ ನೀರು ಭಾರಿ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಉತ್ತಮ ಪ್ರಮಾಣದ ನೀರು ಹರಿದು ಬಂದಿದೆ.ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾ ೧೮೪ ಮಿ.ಮೀ., ನೌಜಾ ೨೭೪ ಮಿ.ಮೀ, ಮಹಾಬಳೇಶ್ವರ ೯೯ ಮಿ.ಮೀ., ತರಾಳಿ ೧೦೮ ಮಿ.ಮೀ, ವಾರಣಾ ೧೩೨ ಮಿ.ಮೀ, ರಾಧಾನಗರಿ ೭೮ ಮಿ.ಮೀ., ದೂಧಗಂಗಾ ೩೯ ಮಿ.ಮೀ. ಮಳೆಯಾಗಿರುವುದರಿಂದ ಹಿಪ್ಪರಗಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇಂದು ಹಿಪ್ಪರಗಿ ಜಲಾಶಯಕ್ಕೆ ಒಟ್ಟು ೨೦,೭೯೦ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ೨೦,೦೪೦ ಕ್ಯುಸೆಕ್ಸ್ ನೀರನ್ನು ಮುಂದೆ ಹರಿ ಬಿಡಲಾಗುತ್ತಿದೆ. ೬ ಟಿಎಂಸಿ ಸಾಮರ್ಥ್ಯದ ಹಿಪ್ಪರಗಿ ಜಲಾಶಯ ೩.೦೬ ಟಿಎಂಸಿ ನೀರು ಸಂಗ್ರಹವಿದ್ದು, ನೀರಿನ ಮಟ್ಟ ೫೨೧.೫೦ ಮೀ. ಇದೆ ಎಂದು ತಹಸೀಲ್ದಾರ್ ಗಿರೀಶ ಸ್ವಾದಿ ತಿಳಿಸಿದ್ದಾರೆ.