ತುಂಗಭದ್ರಾ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್‌ ಬಿಡುಗಡೆ

| Published : Jul 01 2025, 01:47 AM IST / Updated: Jul 01 2025, 01:48 AM IST

ತುಂಗಭದ್ರಾ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್‌ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ತುಂಗಭದ್ರಾ ಜಲಾಶಯದ ಒಳ ಹರಿವು 50605 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ. ವಿದ್ಯುತ್‌ ಉತ್ಪಾದನಾ ಘಟಕದ ಮಾರ್ಗವಾಗಿ ನದಿಗೆ ಸೋಮವಾರ ನೀರು ಹರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಹೊಸಪೇಟೆ

ತುಂಗಭದ್ರಾ ಜಲಾಶಯದ ಒಳ ಹರಿವು 50605 ಕ್ಯುಸೆಕ್ ಇರುವ ಹಿನ್ನೆಲೆ ಜಲಾಶಯದಿಂದ ನದಿಗೆ 2 ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ. ವಿದ್ಯುತ್‌ ಉತ್ಪಾದನಾ ಘಟಕದ ಮಾರ್ಗವಾಗಿ ನದಿಗೆ ಸೋಮವಾರ ನೀರು ಹರಿಸಲಾಗಿದೆ.ಜಲಾಶಯದ ಸಂಗ್ರಹ ಸಾಮರ್ಥ್ಯ 105.788 ಟಿಎಂಸಿ ಇದ್ದು, ಜಲಾಶಯದಲ್ಲಿ ಈಗ 71.795 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಕ್ರಸ್ಟ್‌ಗೇಟ್‌ ಮುಕ್ಕಾಗಿವೆ ಎಂದು ವರದಿ ಬಂದಿರುವ ಹಿನ್ನೆಲೆ ತಜ್ಞರ ಸಲಹೆ ಮೇರೆಗೆ ಈ ವರ್ಷ 80 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ. ಭದ್ರಾ ಮತ್ತು ತುಂಗಾದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟರೆ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಈ ಹಿನ್ನೆಲೆ ರಾಜ್ಯದ ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜನರಿಗೆ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಸ್ಥಳೀಯಾಡಳಿತಗಳಿಗೂ ಮುನ್ನೆಚ್ಚರಿಕೆ ಕ್ರಮವಹಿಸಲು ತುಂಗಭದ್ರಾ ಮಂಡಳಿ ಅಧೀಕ್ಷಕ ಎಂಜಿನಿಯರ್‌ ನಾರಾಯಣ ನಾಯ್ಕ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.ತುಂಗಭದ್ರಾ ಜಲಾಶಯದ ಒಳ ಹರಿವು ಏರಿಕೆ ಆಗುತ್ತಲೇ ಸಾಗಿರುವ ಹಿನ್ನೆಲೆ ನದಿಗೆ ಆರಂಭದಲ್ಲಿ ವಿದ್ಯುತ್‌ ಉತ್ಪಾದನಾ ಘಟಕದ ಮೂಲಕ 2 ಸಾವಿರ ಕ್ಯುಸೆಕ್‌ ನೀರು ಹರಿಸಲಾಗಿದೆ. ಬಳಿಕ ಕ್ರಸ್ಟ್‌ ಗೇಟ್‌ ಎತ್ತರಿಸಿ ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮಂಡಳಿ ಮೂಲಗಳು ತಿಳಿಸಿವೆ.

ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ 2 ಸಾವಿರ ಕ್ಯುಸೆಕ್ ನೀರು ಬಿಟ್ಟಿದ್ದು, ಈ ನೀರು ವಿದ್ಯುತ್ ಉತ್ಪಾದನೆಗೆ ಬಳಕೆಯಾಗಿ ತುಂಗಭದ್ರಾ ನದಿ ಒಡಲು ಸೇರಲಿದೆ.