ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ 20856 ಮಂದಿ ಹಾಜರು

| Published : Mar 26 2024, 01:06 AM IST

ಸಾರಾಂಶ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದ್ದು, ಮಾ.25ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆಯಿತು. 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 10277 ಗಂಡು, 10729 ಹೆಣ್ಣು ಸೇರಿ 21006 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ 10188 ಬಾಲಕರು, 10668 ಬಾಲಕಿಯರು ಸೇರಿ 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 150 ವಿದ್ಯಾರ್ಥಿಗಳು ಗೈರಾಗಿದ್ದರು.

- 150 ವಿದ್ಯಾರ್ಥಿಗಳು ಗೈರು । ಡಿಸಿ, ಡಿಡಿಪಿಐ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ

- - -

ಕನ್ನಡ ಪ್ರಭ ವಾರ್ತೆ, ದಾವಣಗೆರೆ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದ್ದು, ಮಾ.25ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆಯಿತು. 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 10277 ಗಂಡು, 10729 ಹೆಣ್ಣು ಸೇರಿ 21006 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ 10188 ಬಾಲಕರು, 10668 ಬಾಲಕಿಯರು ಸೇರಿ 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 150 ವಿದ್ಯಾರ್ಥಿಗಳು ಗೈರಾಗಿದ್ದರು.

ಸೋಮವಾರ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಕೊಟ್ರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಹಾಯವಾಣಿ:

ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರು, ಶಿಕ್ಷಕರ ಸಹಾಯಕ್ಕಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಸಹಾಯಕ್ಕಾಗಿ ಮೊಃ 9964198201 ಇಲ್ಲಿಗೆ ಕರೆ ಮಾಡಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ತಿಳಿಸಿದ್ದಾರೆ.

ಮಲೇಬೆನ್ನೂರಲ್ಲಿ ಹುಮ್ಮಸ್ಸಿನಿಂದ ಪರೀಕ್ಷೆ ಬರೆದ ಮಕ್ಕಳು: ಮಲೇಬೆನ್ನೂರು ಸರ್ಕಾರಿ ಪಿಯು ಕಾಲೇಜು, ಗ್ರಾಮೀಣ ಭಾಗದ 7 ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆ ಬರೆದರು. ಮಲೇಬೆನೂರು ಕೇಂದ್ರದಲ್ಲಿ ರಂಗನಾಥ ಸಮಗ್ರ ಶಿಕ್ಷಣ ಪ್ರೌಢಶಾಲೆ, ಬೀರಲಿಂಗೇಶ್ವರ ಬಾಲಕರ, ಬಾಲಕಿಯರ ಪ್ರೌಢಶಾಲೆ, ಪಿಯು ಕಾಲೇಜಿನ ಪ್ರೌಢಶಾಲೆ, ಮಾಲತೇಶ ಶಾಲೆ, ಜಾಮಿಯಾ, ಸರ್ಕಾರಿ ಉರ್ದು ಪ್ರೌಢಶಾಲೆಯ ೧೩ ಕೊಠಡಿಗಳಲ್ಲಿ ಮಕ್ಕಳು ಮೊದಲ ದಿನ ಕನ್ನಡ ವಿಷಯಕ್ಕೆ ಪರೀಕ್ಷೆ ಬರೆದರು. ಸೋಮವಾರ ಬೆಳಗ್ಗೆ ನಿಗದಿತ ಸಮಯದೊಳಗೆ ಆಗಮಿಸಿದ ವಿದ್ಯಾರ್ಥಿಗಳು, ತಮ್ಮ ನೋಂದಣಿ ಸಂಖ್ಯೆ ಮತ್ತು ಪರೀಕ್ಷಾ ಕೊಠಡಿಯನ್ನು ಖಾತ್ರಿಪಡಿಸಿಕೊಂಡು, ಹುಮ್ಮಸ್ಸಿನಿಂದ ಪರೀಕ್ಷೆ ಎದುರಿಸಿದರು. - - --25ಕೆಡಿವಿಜಿ44,45ಃ

ದಾವಣಗೆರೆಯಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಪ್ರಥಮ ಪರೀಕ್ಷೆ ನಡೆದಿದ್ದು, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.