ಸಾರಾಂಶ
18 ರಂದು ಸಾರ್ವಜನಿಕರು, ಸಂಘ ಸಂದ್ಥೆಗಳ ಚುನಾಯಿತ ಪ್ರತಿನಿಧಿಗಳ ಪೂರ್ವಭಾವಿ ಸಿದ್ಧತಾ ಸಭೆ
ಕನ್ನಡಪ್ರಭ ವಾರ್ತೆ, ತರೀಕೆರೆಜಿಲ್ಲಾ ಮತ್ತು ತಾಲೂಕು ಕಸಾಪ, ವಿವಿಧ ಸಂಘ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರ ಪೂರ್ಣ ಸಹಕಾರದಿಂದ ತರೀಕೆರೆ ಪಟ್ಟಣ ಬಯಲು ರಂಗ ಮಂದಿರದಲ್ಲಿ ಮಾ. 7 ಮತ್ತು 8 ರಂದು ಚಿಕ್ಕಮಗಳೂರು ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುತ್ತಿರುವ ಕುರಿತು ಜ.18 ರಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಲು ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.ಜ.18 ರಂದು ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗುವುದು, ಸಮ್ಮೇಳನದ ಸಂಪೂರ್ಣ ಯಶಸ್ಸಿಗೆ ಸರ್ವರೂ ಸಹಕರಿಸಬೇಕೆಂದು ಶಾಸಕ ಜೆ.ಎಚ್.ಶ್ರೀನಿವಾಸ್ ಮನವಿ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ತರೀಕೆರೆ ತಾಲೂಕು ವಿವಿಧ ಕ್ಷೇತ್ರ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯದ ಗಮನ ಸೆಳೆದಿದೆ. ಹಿರಿಯರಾದ ಗೊರುಚ, ಕಾದಂಬರಿಕಾರ ಅನಂದ್ ರಂತಹ ಅನೇಕ ಮಹನೀಯರು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದಾರೆ. ಅಜ್ಜಂಪುರ, ಮೂಡಿಗೆರೆ, ಕಳಸ ಇನ್ನಿತರೆಡೆ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇದೀಗ ತರೀಕೆರೆಯಲ್ಲಿ ಜಿಲ್ಲಾ ಮಟ್ಟದ 20ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲರ ಸಹಕಾರದಿಂದ ಆಯೋಜಿಸಲಾಗುವುದು ಎಂದರು.
ಪೂರ್ವ ಭಾವಿಸಭೆಯಲ್ಲಿ ಜಿಲ್ಲಾ ಕೇಂದ್ರ, ಎಲ್ಲಾ ತಾಲೂಕುಗಳ ಪರಿಷತ್ತು ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳವರು ಭಾಗವಹಿಸಬೇಕೆಂದು ಕೋರಿದರು.ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ, ಕನ್ನಡಶ್ರೀ ಬಿ.ಎಸ್.ಭಗವಾನ್, ಕಸಬಾ ಹೋಬಳಿ ಅಧ್ಯಕ್ಷ ಜಗದೀಶ್, ಲೇಖಕ ತ.ಮ.ದೇವಾನಂದ್, ಸಮ್ಮೇಳನ ಸ್ವಾಗತ ಸಮಿತಿ ಕೋಶಾಧ್ಯಕ್ಷ ಮಿಲ್ಟ್ರಿ ಶ್ರೀನಿವಾಸ್, ಕಸಾಪ ಹಿರಿಯ ಸದಸ್ಯ ಶಿವಣ್ಣ, ಜಿಪಂ ಮಾಜಿ ಸದಸ್ಯ ಕೆ.ಎಚ್.ಮಹೇಂದ್ರ, ತಾಲೂಕು ಶಾಮಿಯಾನ ಲೈಟಿಂಗ್ಸ್ ಮತ್ತು ಡೆಕೋರೇಷನ್ ಮಾಲೀಕರ ಸಂಘದ ಅಧ್ಕಕ್ಷ ಗಿರೀಶ್ ಚವ್ಹಾಣ್, ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್, ತಹಸೀಲ್ದಾರ್ ವಿಶ್ವಜೀತ್ ಮೇಹತಾ ಮತ್ತಿತರರು ಭಾಗವಹಿಸಿದ್ದರು.
9ಕೆಟಿಆರ್.ಕೆ.21ಃತರೀಕೆರೆಯಲ್ಲಿ ಜಿಲ್ಲಾ ಮತ್ತು ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಂದ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್, ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ತಾ.ಕಸಾಪ ಅಧ್ಯಕ್ಷ ರವಿ ದಳವಾಯಿ, ಜಗದೀಶ್, ತ.ಮ. ದೇವಾನಂದ್, ಕನ್ನಡಶ್ರೀ ಬಿ.ಎಸ್.ಭಗವಾನ್, ಜಿಪಂ ಮಾಜಿ ಸದಸ್ಯ ಕೆ.ಎಚ್.ಮಹೇಂದ್ರ, ಉಪವಿಭಾಗಾದಿಕಾರಿ ಡಾ.ಕಾಂತರಾಜ್, ತಹಸೀಲ್ದಾರ್ ವಿಶ್ವಜೀತ್ ಮೇಹತಾ ಮತ್ತಿತರರು ಇದ್ದರು.