2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್‌ ಖರ್ಗೆ

| Published : May 19 2024, 01:47 AM IST / Updated: May 19 2024, 11:48 AM IST

Drinking Water
2200 ಹಳ್ಳಿಗೆ ಕುಡಿವ ನೀರಿಲ್ಲ: ಪ್ರಿಯಾಂಕ್‌ ಖರ್ಗೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಲ್ಲಿನ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಎಲ್ಲ ಗ್ರಾಮಗಳಿಗೂ ಆದ್ಯತೆ ಮೇರೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

 ಬೆಂಗಳೂರು :  ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಲ್ಲಿನ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಎಲ್ಲ ಗ್ರಾಮಗಳಿಗೂ ಆದ್ಯತೆ ಮೇರೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ 158 ತಾಲೂಕುಗಳಲ್ಲಿರುವ 26,106 ಗ್ರಾಮಗಳ ಪೈಕಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ಹಾಗೂ 1,659 ಗ್ರಾಮಗಳಿಗೆ 2,098 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಅದರಿಂದ ನೀರು ಪೂರೈಸಲಾಗುತ್ತಿದೆ. ಅದರ ಜತೆಗೆ ಉಳಿದ ಗ್ರಾಮಗಳ ಮೇಲೂ ನಿಗಾ ವಹಿಸಲಾಗಿದ್ದು, ಅಗತ್ಯವಿದ್ದರೆ ಆ ಗ್ರಾಮಗಳಿಗೂ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ ಲಭ್ಯವಿರುವ ಅನುದಾನವನ್ನು ಮೊದಲ ಆದ್ಯತೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಹೆಚ್ಚುವರಿಯಾಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ 85ಇಲಾಖೆಯಿಂದ ಅನುದಾನ ನೀಡಲಾಗಿದೆ. ಅದರ ಜತೆಗೆ ಹೆಚ್ಚುವರಿಯಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿಗೆ 20 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸದ್ಯ 480 ಬಹುಗ್ರಾಮ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು, ಅದರಿಂದ 6,828 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಯೋಜನೆಗಳಲ್ಲಿ ಹೆಚ್ಚಾಗಿ ನದಿ ಆಧಾರಿತ ಮತ್ತು ಜಲಾಶಯಗಳ ಮೇಲ್ಭಾಗದಿಂದ ನೀರು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ 413 ಗ್ರಾಮಗಳನ್ನು ಒಳಗೊಂಡ 37 ಬಹುಗ್ರಾಮ ಯೋಜನೆಗಳ ಜಲಮೂಲಗಳು ಒಣಗಿದ್ದು, ಆ ಗ್ರಾಮಗಳಿಗೆ ಟ್ಯಾಂಕರ್‌ ಮತ್ತು ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕೆಆರ್‌ಎಸ್‌ ಡ್ಯಾಂನಲ್ಲಿ 6 ವರ್ಷದ ಕನಿಷ್ಠ ನೀರು:ಕಳೆದ ಆರು ವರ್ಷಗಳಿಗೆ ಹೋಲಿಸಿದರೆ ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಹಾಲಿ ಜಲಾಶಯದಲ್ಲಿ80 25 ಅಡಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. 2019 ರಲ್ಲಿ ಇದೇ ದಿನ ಜಲಾಶಯದಲ್ಲಿ 81 88 ಅಡಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷ ನಿರೀಕ್ಷೆಯಂತೆ ಮುಂಗಾರು ಮಳೆಯಾಗದ ಕಾರಣ ಜಲಾಶಯ ಭರ್ತಿಯಾಗಲಿಲ್ಲ. ಮಳೆ ಕೊರತೆಯಿಂದ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ೧೧೪ ಅಡಿ ತಲುಪುವುದಕ್ಕಷ್ಟೇ ಶಕ್ತವಾಗಿತ್ತು.ಸುಪ್ರೀಂ ಕೋರ್ಟ್, ಪ್ರಾಧಿಕಾರಗಳ ಆದೇಶಗಳಂತೆ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಿದ್ದರಿಂದ ಜಲಾಶಯದಲ್ಲಿ ನೀರು ಉಳಿಸಿಕೊಳ್ಳಲು ಕಷ್ಟಪಡುವಂತಾಯಿತು.

ಪ್ರಸ್ತುತ ಕೆಆರ್‌ಎಸ್ ಜಲಾಶಯದಲ್ಲಿ 80.25 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಆಣೆಕಟ್ಟೆಗೆ 1560 ಕ್ಯುಸೆಕ್‌ನಷ್ಟು ಒಳಹರಿವಿದ್ದರೆ 155 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.18 ಮೇ 2023 ರಲ್ಲಿ 86.14 ಅಡಿ ನೀರಿದ್ದರೆ, 684 ಕ್ಯುಸೆಕ್ ಒಳಹರಿವು, 181 ಕ್ಯುಸೆಕ್ ಹೊರಹರಿವಿತ್ತು. 18  ಮೇ 2022 ರಲ್ಲಿ ಅಣೆಕಟ್ಟೆಯಲ್ಲಿ 100 16 ಅಡಿ ನೀರು ಸಂಗ್ರಹವಾಗಿ ರೈತರು ಮತ್ತು ಸಾರ್ವಜನಿಕರಲ್ಲಿ ನಿರಾಳಭಾವ ಮೂಡಿಸಿತ್ತು. ಅಂದು ಜಲಾಶಯಕ್ಕೆ 2825

ಕ್ಯುಸೆಕ್ ಒಳಹರಿವು, 1437 ಕ್ಯುಸೆಕ್ ಹೊರಹರಿವಿತ್ತು. 18 ಮೇ 2021 ರಲ್ಲಿ ಅಣೆಕಟ್ಟೆಯಲ್ಲಿ 87 ಅಡಿಯಷ್ಟು ನೀರಿದ್ದರೆ 675 ಕ್ಯುಸೆಕ್  ಒಳಹರಿವು, 3743 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು. 18 ಮೇ 2020 ರಲ್ಲಿ95 .18  ಅಡಿ ನೀರಿದ್ದು, 139 ಕ್ಯುಸೆಕ್ ಒಳಹರಿವು, 3856 ಕ್ಯುಸೆಕ್ ಹೊರಹರಿವಿತ್ತು. 18ಮೇ 2019 ರಲ್ಲಿ 81.88 ಅಡಿ ನೀರು ಸಂಗ್ರಹವಾಗಿ 142 ಕ್ಯುಸೆಕ್ ಒಳಹರಿವು, 351 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು.ಆರು ವರ್ಷಗಳಿಂದ ಬೇಸಿಗೆಯಲ್ಲೂ ಜಲಾಶಯದಲ್ಲಿ ಉತ್ತಮ ನೀರಿನಮಟ್ಟ ಕಾಯ್ದುಕೊಂಡಿದ್ದ ಕೆಆರ್‌ಎಸ್ ಈ ವರ್ಷ        ಕಳಾಹೀನ ಸ್ಥಿತಿ ತಲುಪಿದೆ. ಜಲಾಶಯದಲ್ಲಿ 10 987 ಟಿಎಂಸಿ ಅಡಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಕುಡಿಯುವುದಕ್ಕೆ ಸಾಕಾಗುವಷ್ಟು ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹವಾಗಿದೆ.

  2019  ರಿಂದ 2022 ರವರೆಗೆ ಪೂರ್ವ ಮುಂಗಾರು ಉತ್ತಮವಾಗಿತ್ತು. ಆ ಸಮಯದಲ್ಲಿ ಜಲಾಶಯದ ನೀರಿನ ಮಟ್ಟವೂ ಸಮಾಧಾನಕರವಾಗಿತ್ತು. ಈ ಬಾರಿ ಆಣೆಕಟ್ಟೆಯಲ್ಲಿ80.25 ಅಡಿಯಷ್ಟು ಮಾತ್ರ ನೀರಿದೆ. ಈ ಬಾರಿಯ ಬೇಸಿಗೆಯಲ್ಲಿ ಕಂಡು ಕೇಳರಿಯದಷ್ಟು ರಣಬಿಸಿಲು ಹಾಗೂ ಉಷ್ಣಹವೆಯಿಂದ ಭೂಮಿಯ ತಾಪವೂ ಹೆಚ್ಚಿದೆ. ಇದರಿಂದ ಕೇರಳ, ಕೊಡಗು ಭಾಗದಲ್ಲಿ ಹೆಚ್ಚು ಮಳೆಯಾದರೂ ಭೂಮಿ ಹೆಚ್ಚಾಗಿ ನೀರನ್ನು ಹೀರಿಕೊಳ್ಳುತ್ತಿರುವುದರಿಂದ ಒಳಹರಿವಿನಲ್ಲಿ ಏರಿಕೆಯಾಗದಂತಾಗಿದೆ. ಇದು ರೈತರ ನಿರಾಸೆಗೂ ಕಾರಣವಾಗಿದೆ.

             70  ಅಡಿಗಿಂತಲೂ ಕಡಿಮೆ ಮಟ್ಟ: ಕಳೆದ 20 ವರ್ಷಗಳ ಪೈಕಿ 4 ವರ್ಷಗಳಲ್ಲಿ ಮೇ ತಿಂಗಳ 18 ರಂದು ಜಲಾಶಯದ ನೀರಿನ ಮಟ್ಟ 70  ಅಡಿಗಳಿಗಿಂತಲೂ ಕೆಳಮಟ್ಟಕ್ಕೆ ಕುಸಿದಿತ್ತು. 2ಮೇ 18 ರಂದು ಅಣೆಕಟ್ಟೆಯ ನೀರಿನ ಮಟ್ಟ 68 75 ಅಡಿ ಇದ್ದು, 153 ಕ್ಯುಸೆಕ್ ಒಳಹರಿವು, 254 ಕ್ಯುಸೆಕ್ ಹೊರಹರಿವು ದಾಖಲಾಗಿ ಅಣೆಕಟ್ಟೆಯಲ್ಲಿ6.636  ಟಿಎಂಸಿ ಅಡಿ ನೀರು ದಾಖಲಾಗಿತ್ತು. ಅದಾದ ಬಳಿಕ2013 ರ ಮೇ 18 ರಂದು ಜಲಾಶಯದಲ್ಲಿ 64 57 ಅಡಿ ನೀರು ದಾಖಲಾಗಿದ್ದು, 859  ಕ್ಯುಸೆಕ್ ಒಳಹರಿವು,767 ಕ್ಯುಸೆಕ್ ಹೊರಹರಿವಿದ್ದು, 5.470  ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. 2017  ರ ಮೇ 18 ರಲ್ಲಿ69.40 ಅಡಿ ನೀರಿದ್ದು, 183  ಕ್ಯುಸೆಕ್ ಒಳಹರಿವು, 862 ಕ್ಯುಸೆಕ್ ಹೊರಹರಿವಿನೊಂದಿಗೆ 6.853 ಟಿಎಂಸಿ ಅಡಿ ನೀರಿದ್ದರೆ, 2018 ರ ಮೇ 18 ರಲ್ಲಿ69.52  ಅಡಿ ನೀರು ದಾಖಲಾಗಿ 343  ಕ್ಯುಸೆಕ್ ಒಳಹರಿವು,950೦ ಕ್ಯುಸೆಕ್ ಹೊರಹರಿವಿನೊಂದಿಗೆ 6.872 ಟಿಎಂಸಿ ನೀರು ಸಂಗ್ರಹವಾಗಿತ್ತು. 100 ರ ಗಡಿ ದಾಟಿದ್ದು 2 ವರ್ಷ ಮಾತ್ರ: ಕಳೆದ ಎರಡು ದಶಕದಲ್ಲಿ ಎರಡು ವರ್ಷ ಮಾತ್ರ ಮುಂಗಾರು ಆರಂಭಕ್ಕೆ ಮುನ್ನವೇ ಜಲಾಶಯ ೧೦೦ ಅಡಿಯ ಗಡಿ ದಾಟಿದ್ದು ವಿಶೇಷ. 2004 ರ ಮೇ 18 ರಂದು ಅಣೆಕಟ್ಟೆಯಲ್ಲಿ104.51  ಅಡಿ ನೀರು ದಾಖಲಾಗಿದ್ದು,153  ಕ್ಯುಸೆಕ್ ಒಳಹರಿವು, 2462  ಕ್ಯುಸೆಕ್ ಹೊರಹರಿವಿದ್ದು, ಜಲಾಶಯದಲ್ಲಿ 26 .556   ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.2022ರ ಮೇ 18 ರಂದು ಅಣೆಕಟ್ಟೆಯಲ್ಲಿ 100.16ಅಡಿ ನೀರು ಶೇಖರಣೆಯಾಗಿ, 2825 ಕ್ಯುಸೆಕ್ ಒಳಹರಿವು, 1437  ಕ್ಯುಸೆಕ್ ಹೊರಹರಿವಿದ್ದು 22. 936 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.