ಕನ್ನಡಪ್ರಭ ವಾರ್ತೆ ತಿಪಟೂರು
ನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ೨೩೩ನೇ ಅಜ್ಜಯ್ಯನ ಜಾತ್ರಾ ಮಹೋತ್ಸವ ಹಾಗೂ ಕರಿಬಸವದೇಶಿ ಕೇಂದ್ರ ಮಹಾಸ್ವಾಮಿಗಳ ೧೮ನೇ ವರ್ಷದ ಪುಣ್ಯರಾಧನೆ ಕಾರ್ಯಕ್ರಮ ಫೆ. ೧೧ ರಿಂದ ೧೩ರವರೆಗೆ ಮಠದ ಆವರಣದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಶ್ರೀ ಕಾಡಸಿದ್ದೇಶ್ವರ ಮಠದ ವ್ಯವಸ್ಥಾಪಕ ಶಂಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.೧೧ ರ ಬುಧವಾರ ಬೆಳಿಗ್ಗೆ ೮ಗಂಟೆಗೆ ಷಟ್‌ಸ್ಥಲ ಧ್ವಜಾರೋಹಣ ನಡೆಯಲಿದ್ದು ದಿವ್ಯ ಸಾನಿಧ್ಯವನ್ನು ಹಿರಿಯ ಶ್ರೀಗಳಾದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರರು ವಹಿಸಲಿದ್ದು ಧ್ವಜಾರೋಹಣವನ್ನು ಗೋಸಲ ಶ್ರೀ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ತೆವಡಿಹಳ್ಳಿ ನೆರವೇರಿಸಲಿದ್ದಾರೆ. ಸಾನ್ನಿಧ್ಯವನ್ನು ದೊಡ್ಡಮೇಟಿಕುರ್ಕೆ ಬೂದಿಹಾಳ್ ವಿರಕ್ತಮಠದ ಶಶಿಶೇಖರ ಸಿದ್ಧಬಸವ ಸ್ವಾಮೀಜಿ ವಹಿಸಲಿದ್ದಾರೆ, ಬೆಳಿಗ್ಗೆ ೧೧ ಗಂಟೆಗೆ ಅಕ್ಕಮಹಾದೇವಿ ಮಹಿಳಾ ಸಮಾಜದ ಸದಸ್ಯರಿಂದ ಲಲಿತಾ ಸಹಸ್ರನಾಮ ೧೦೮ ಮುತ್ತೈದೆಯರಿಗೆ ಬಾಗಿನ ಸೇವೆ ನಡೆಯಲಿದ್ದು, ಎಸ್.ಕೆ. ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿಗಳಿಂದ ಚಿಣ್ಣರ ಸಂತೆ ನಡೆಯಲಿದೆ.
೧೨ರಂದು ಗುರುವಾರ ಬೆಳಿಗ್ಗೆ ೯ಗಂಟೆಗೆ ಗಜ ಪಡೆಗಳೊಂದಿಗೆ ಶ್ರೀ ಕಾಡಸಿದ್ದೇಶ್ವರ ಸ್ವಾಮಿಯವರ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದ್ದು ಚಾಲನೆಯನ್ನು ಕಿರಿಯ ಶ್ರೀಗಳಾದ ಶ್ರೀ ಅಭಿನವ ಕಾಡಸಿದ್ದೇಶ್ವರ ಶ್ರೀಗಳು ನಿಡಲಿದ್ದಾರೆ. ಸಂಜೆ ೫ಗಂಟೆಗೆ ಶ್ರೀ ಕಾಡಸಿದ್ದೇಶ್ವರ ಸ್ವಾಮಿಗಳ ರಥೋತ್ಸವ ಹರ-ಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ವಾದ್ಯ ವೈಭವ ಜಾನಪದ ಕಲಾತಂಡಗಳೊಂದಿಗೆ ನಡೆಯಲಿದೆ.ಸಂಜೆ ೬ಗಂಟೆಗೆ ಸಾಂಸ್ಕೃತಿಕ ಸೊಬಗು ಹಬ್ಬ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸಮಾಜ ಸೇವಕರನ್ನು ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮಕ್ಕೆ ದಿವ್ಯಸಾನಿದ್ಯವನ್ನು ಡಾ. ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು ಉದ್ಘಾಟನೆಯನ್ನು ಕೆಪೆಕ್ ತೆಂಗು ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ಸಿ. ನಾಗೇಶ್, ಮಾಜಿ ಶಾಸಕ ನಂಜಾಮರಿ, ಪ್ರಭು ಕುಮಾರ್, ಲಕ್ಷ್ಮೀನಾರಾಯಣ್, ಜೆಡಿಎಸ್ ಮುಖಂಡ ಎನ್.ಅರ್, ಸಂತೋಷ, ಹಾಸನ ವೀರಶೈವ ಮಹಾಸಭಾ ಅಧ್ಯಕ್ಷ ನವಿಲೆ ಪರಮೇಶ್, ಟಿಎನ್ಷಡಕ್ಷರಿ, ಎನ್ ಎನ್ ಯುವರಾಜ್ ಸಿ.ಎ. ನಿವೃತ್ತ ಐಎಎಸ್ ಅಧಿಕಾರಿ ವಿಶ್ವನಾಥ ರೆಡ್ಡಿ, ಕೆ.ಟಿ. ಶಾಂತಕುಮಾರ್, ಕೆ ಪಿ ನಂಜುಂಡಿ, ಸುದ್ದಿ ವಾಚಕ ಅಜಿತ್ ಹನುಮಕ್ಕನವರ್ ಇತರರು ಭಾಗವಹಿಸಲಿದ್ದಾರೆ.
೧೩ರಂದು ಶುಕ್ರವಾರ ಬೆಳಿಗ್ಗೆ ೧೦.೩೦ಕ್ಕೆ ಶ್ರೀ ಚನ್ನಬಸವ ಸ್ವಾಮಿಗಳು ಕನಕಪುರ ಸಮ್ಮುಖದಲ್ಲಿ ಹರಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ಧರ್ಮಸಭೆ ನಡೆಯಲಿದ್ದು ದಿವ್ಯ ಸಾನಿಧ್ಯವನ್ನು ಡಾ. ಕರಿವೃಷಭ ದೇಶಿ ಕೇಂದ್ರ ಶಿವಯೋಗಿಶ್ವರ ಸ್ವಾಮಿಗಳು ವಹಿಸಲಿದ್ದು ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಕೆ ಷಡಕ್ಷರಿ, ಪ್ರಾಸ್ತಾವಿಕ ನುಡಿ ಕೇಂದ್ರ ಜಲ ಶಕ್ತಿ ಹಾಗೂ ರಾಜ್ಯ ರೈಲ್ವೆ ಸಚಿವ ವಿ ಸೋಮಣ್ಣ ನೆರವೆರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಸಂಪುಟದ ಸಚಿವರು, ಶಾಸಕರು, ಸಮಾಜ ಸೇವಕರು, ಶ್ರೀಮಠದ ಸದ್ಭಕ್ತರು ಆಗಮಿಸಲಿದ್ದಾರೆ ಎಂದು ತಿಳಿಸಿದರು.