ಒಟ್ಟು 24 ಕಾಮಗಾರಿಗಳು ಸೇರಿ ₹800ಕ್ಕೂ ಅಧಿಕ ಕೋಟಿ ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಾಗಿದೆ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಒಟ್ಟು 24 ಕಾಮಗಾರಿಗಳು ಸೇರಿ ₹800ಕ್ಕೂ ಅಧಿಕ ಕೋಟಿ ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡಲಾಗಿದೆ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಕೇಂದ್ರ ಬಸ್ ನಿಲ್ದಾಣದ ಎದುರಿಗೆ ವೀರರಾಣಿ ಕಿತ್ತೂರು ಚೆನ್ನಮ್ಮರ ಮೂರ್ತಿ ಸ್ಥಾಪಿಸಬೇಕು ಎಂದು ಜಿಲ್ಲೆಯ ಜನರ ಬೇಡಿಕೆ ಇತ್ತು. ಈಗ ಅದನ್ನು ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾಗಿದೆ. ಜೊತೆಗೆ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿ ಗೌರವ ಸಲ್ಲಿಸಲಾಗಿದೆ. ₹3 ಕೋಟಿ ವೆಚ್ಚದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮನ ಭವ್ಯವಾದ ಸಭಾಭವನ ನಿರ್ಮಿಸಲಾಗಿದೆ. ನಗರದಲ್ಲಿ ದೇಶಮುಖರ ಹುತಾತ್ಮ ಸರ್ಕಲ್ ಮತ್ತೆ ಚಾಲನೆಗೆ ತರಲಾಗಿದೆ. ತಾಲೂಕಿನ ಜಂಬಗಿಯಲ್ಲಿ ಜನಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮಳ ವಂಶಸ್ಥರನ್ನು ಸನ್ಮಾನಿಸಲಾಗುವುದು. ಅವಿಭಾಜ್ಯ ವಿಜಯಪುರ ಜಿಲ್ಲೆಗೆ ಅನುಕೂಲವಾಗುವಂತಹ ಸೈಕ್ಲಿಂಗ್ ವೆಲೋಡ್ರೋಮ್ ಸ್ಥಾಪಿಸಿ, ಉದ್ಘಾಟಿಸಲಾಗಿದೆ ಎಂದರು.ದೀರ್ಘಾವಧಿ ಸಿಎಂ ಎನಿಸಿಕೊಂಡಿರುವ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನೇಕ ಯೋಜನೆಗಳನ್ನು ನೀಡುವ ಮೂಲಕ ಎಲ್ಲರ ಮನೆಮಾತಾಗಿದ್ದಾರೆ. ಅವರನ್ನು ಗೌರವಿಸುವ ಕೆಲಸ ಮಾಡಲಾಗುವುದು.
-ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು.