ರಾಮನಗರ: ಜಿಲ್ಲೆಯವರೇ ಆದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಾತ್ರಿಯಾಗುತ್ತಿದ್ದಂತೆ ಡಿಕೆಶಿ ಅವರಿಗೆ ಶುಭಾಶಯ ಕೋರುವ ಬ್ಯಾನರ್ ಮತ್ತು ಕಟೌಟ್‌ಗಳು ಎಲ್ಲೆಡೆ ರಾರಾಜಿಸುತ್ತಿವೆ.ಜಿಲ್ಲಾ ಕೇಂದ್ರ ರಾಮನಗರದಲ್ಲಿ ಪೊಲೀಸ್ ಭವನ ಬಳಿಯ ವೃತ್ತ ಹಾಗೂ ಐಜೂರು ವೃತ್ತದಲ್ಲಿ 25 ಅಡಿ ಎತ್ತರದ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವಿರುವ ಕಟೌಟ್ ಅನ್ನು ನಿಲ್ಲಿಸಲಾಗಿದೆ
ರಾಮನಗರ: ಜಿಲ್ಲೆಯವರೇ ಆದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಖಾತ್ರಿಯಾಗುತ್ತಿದ್ದಂತೆ ಡಿಕೆಶಿ ಅವರಿಗೆ ಶುಭಾಶಯ ಕೋರುವ ಬ್ಯಾನರ್ ಮತ್ತು ಕಟೌಟ್‌ಗಳು ಎಲ್ಲೆಡೆ ರಾರಾಜಿಸುತ್ತಿವೆ.
ಜಿಲ್ಲಾ ಕೇಂದ್ರ ರಾಮನಗರದಲ್ಲಿ ಪೊಲೀಸ್ ಭವನ ಬಳಿಯ ವೃತ್ತ ಹಾಗೂ ಐಜೂರು ವೃತ್ತದಲ್ಲಿ 25 ಅಡಿ ಎತ್ತರದ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವಿರುವ ಕಟೌಟ್ ಅನ್ನು ನಿಲ್ಲಿಸಲಾಗಿದೆ.ಪೊಲೀಸ್ ಭವನ ಬಳಿಯ ಕಟೌಟ್ ನಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಹಾಗೂ ಐಜೂರು ವೃತ್ತದಲ್ಲಿನ ಕಟೌಟ್ ನಲ್ಲಿ ಪಕ್ಷ ನಿಷ್ಠೆಗೆ ಸಂದ ಗೌರವ ಎಂದು ಟ್ಯಾಗ್ ಲೈನ್ ಹಾಕಲಾಗಿದೆ.
ಇಷ್ಟೇ ಅಲ್ಲದೆ ಹಳೇ ಮೈಸೂರು - ಬೆಂಗಳೂರು ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳ ಕಟ್ಟಡಗಳ ಮೇಲಿನ ಜಾಹೀರಾತು ಫಲಕಗಳಲ್ಲಿಯೂ ಡಿ.ಕೆ.ಶಿವಕುಮಾರ್ ಅವರಿಗೆ ಶುಭಾಶಯ ಕೋರುವ ಬ್ಯಾನರ್ ಗಳನ್ನು ಅಳವಡಿಸಲಾಗಿದೆ.30ಕೆಆರ್ ಎಂಎನ್ 4.ಜೆಪಿಜಿ
ರಾಮನಗರದ ಪೊಲೀಸ್ ಭವನ ಬಳಿಯ ವೃತ್ತದಲ್ಲಿ ಡಿ.ಕೆ.ಶಿವಕುಮಾರ್ ಅವರ ಕಟೌಟ್ ಅಳವಡಿಸಿರುವುದು.