48 ಪಿಕೆಪಿಎಸ್ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಾಣಕ್ಕೆ ತಲಾ ₹25 ಲಕ್ಷ

| Published : Aug 14 2025, 01:02 AM IST

48 ಪಿಕೆಪಿಎಸ್ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಾಣಕ್ಕೆ ತಲಾ ₹25 ಲಕ್ಷ
Share this Article
  • FB
  • TW
  • Linkdin
  • Email

ಸಾರಾಂಶ

ತಮ್ಮ ಹಾಗೂ ಸ್ಥಳೀಯ ಕ್ಷೇತ್ರದ ಶಾಸಕ ವಿಠ್ಠಲ ಹಲಗೇಕರ ಪ್ರಯತ್ನದ ಫಲವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ತಾಲೂಕಿನ 48 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರೈತ ಭವನ ನಿರ್ಮಿಸಲು ತಲಾ ₹25 ಲಕ್ಷದಂತೆ ₹12 ಕೋಟಿ ಮೊತ್ತದ ಅನುದಾನ ಮಂಜೂರಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಖಾನಾಪುರ

ತಾಲೂಕಿನ ಬೀಡಿ ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ರೈತ ಭವನ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಈಗಾಗಲೇ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಿಗೆ ರೈತ ಭವನ ನಿರ್ಮಿಸುವ ಕುರಿತು ಸರ್ಕಾರದಿಂದ ಅನುಮೋದನೆ ಪತ್ರ ನೀಡಲಾಗಿದೆ ಎಂದರು.ಕಳೆದ ವರ್ಷ ಅಕ್ಟೋಬರ್‌ನಲ್ಲಿ ತಾವು ಮತ್ತು ಹಲಗೇಕರ ಜಂಟಿಯಾಗಿ ಸರ್ಕಾರಕ್ಕೆ ಪತ್ರ ಬರೆದು ಪಿಕೆಪಿಎಸ್‌ಗಳಿಗೆ ರೈತ ಭವನ ನಿರ್ಮಿಸಿಕೊಳ್ಳಲು ತಲಾ ₹25 ಲಕ್ಷ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ್ದು, ತಮ್ಮಿಬ್ಬರ ಮನವಿಯನ್ನು ಪರಿಗಣಿಸಿದ ಸರ್ಕಾರ ರೈತ ಭವನ ನಿರ್ಮಾಣಕ್ಕೆ ನೀರಾವರಿ ನಿಗಮದ ಮೂಲಕ ಅನುದಾನ ಮಂಜೂರು ಮಾಡಿದೆ ಎಂದು ವಿವರಿಸಿದರು.ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ತಾಲೂಕಿನ ವಿವಿಧ ಪಿಕೆಪಿಎಸ್‌ಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ರೈತ ಭವನಗಳನ್ನು ನಿರ್ಮಿಸಿಕೊಂಡು ರೈತ ಭವನದ ಮೂಲಕ ಸಮುದಾಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಕಾರ್ಯಕ್ರಮದಲ್ಲಿ ರಾಜು ಸಿದ್ಧಾನಿ, ಭರಮಾಣಿ ಪಾಟೀಲ, ಸಂತೋಷ ಕಾಶೀಲಕರ ಸೇರಿದಂತೆ ತಾಲೂಕಿನ ವಿವಿಧ ಪಿಕೆಪಿಎಸ್‌ಗಳ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿ ಹಾಗೂ ರೈತರು ಇದ್ದರು.