ಕ್ಯಾನ್ಸರ್‌ ಮಕ್ಕಳಿಗೆ ದಾನಿಗಳ ಸಹಕಾರದಿಂದ 25 ಲಕ್ಷ ನೆರವು: ವೇದವ್ಯಾಸ್‌ ಕಾಮತ್‌

| Published : Mar 09 2025, 01:48 AM IST

ಕ್ಯಾನ್ಸರ್‌ ಮಕ್ಕಳಿಗೆ ದಾನಿಗಳ ಸಹಕಾರದಿಂದ 25 ಲಕ್ಷ ನೆರವು: ವೇದವ್ಯಾಸ್‌ ಕಾಮತ್‌
Share this Article
  • FB
  • TW
  • Linkdin
  • Email

ಸಾರಾಂಶ

ಲಯನ್ಸ್‌ ಇಂಟರ್‌ನ್ಯಾಷನಲ್‌ ಡಿಸ್ಟ್ರಿಕ್ಟ್ 317, ಐಡಿಎಫ್‌ಸಿ ಫ‌ಸ್ಟ್‌ ಬ್ಯಾಂಕ್‌ ಮತ್ತು ಬಿಎಎನ್‌ಎಂಎಸ್‌ ಮಂಗಳೂರು ತಾಲೂಕು ಸಮಿತಿ ಮಹಿಳಾ ಘಟಕದ ಸಹಯೋಗದಲ್ಲಿ ಶನಿವಾರ ಇಲ್ಲಿನ ಪುರಭವನದಲ್ಲಿ ತಪಸ್ಯ ಫೌಂಡೇಶನ್ ವತಿಯಿಂದ ಶೌರ್ಯದ ಹೆಸರಲ್ಲಿ ಸಾಹಸಿಗಳನ್ನು ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಕ್ಯಾನ್ಸರ್ ಮಕ್ಕಳಿಗಾಗಿ ನಾಲ್ಕು ತಿಂಗಳೊಳಗೆ ದಾನಿಗಳ ಸಹಕಾರದಿಂದ 25 ಲಕ್ಷ ರು. ನೀಡುವುದಾಗಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭರವಸೆ ನೀಡಿದ್ದಾರೆ.

ಲಯನ್ಸ್‌ ಇಂಟರ್‌ನ್ಯಾಷನಲ್‌ ಡಿಸ್ಟ್ರಿಕ್ಟ್ 317, ಐಡಿಎಫ್‌ಸಿ ಫ‌ಸ್ಟ್‌ ಬ್ಯಾಂಕ್‌ ಮತ್ತು ಬಿಎಎನ್‌ಎಂಎಸ್‌ ಮಂಗಳೂರು ತಾಲೂಕು ಸಮಿತಿ ಮಹಿಳಾ ಘಟಕದ ಸಹಯೋಗದಲ್ಲಿ ಶನಿವಾರ ಇಲ್ಲಿನ ಪುರಭವನದಲ್ಲಿ ತಪಸ್ಯ ಫೌಂಡೇಶನ್ ವತಿಯಿಂದ ಶೌರ್ಯದ ಹೆಸರಲ್ಲಿ ಸಾಹಸಿಗಳನ್ನು ಗೌರವಿಸಿ ಅವರು ಮಾತನಾಡಿದರು.

ದಿಕ್ಸೂಚಿ ಭಾಷಣ ಮಾಡಿದ ಖ್ಯಾತ ಅಂಕಣಕಾರ್ತಿ, ಚಿತ್ರ ನಟಿ, ಚಿತ್ರ ನಿರ್ದೇಶಕಿ, ಸಮಾಜಸೇವಕಿ ರೂಪಾ ಅಯ್ಯರ್ ಮಾತನಾಡಿ, ಸ್ತ್ರೀಯರು ತಮ್ಮ ಚೈತನ್ಯಶಕ್ತಿಯನ್ನು ಜಾಗೃತಗೊಳಿಸಿ ಸಾಧನೆ ಮಾಡಬೇಕು‌ ಎಂದರು.

ಲಯನ್ ಜಿಲ್ಲಾ ರಾಜ್ಯಪಾಲ 317 ಡಿ. ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಕಾರ್ಯಕ್ರಮ ಉದ್ಘಾಟಿಸಿ, ಸ್ತ್ರೀ ತಮ್ಮ ಪರಿಶ್ರಮ, ಕಾಳಜಿ, ತ್ಯಾಗದ ಮೂಲಕ ಇಡೀ ಕುಟುಂಬದ ಭದ್ರತೆಯಾಗಿರುತ್ತಾಳೆ ಎಂದರು.

ಬಾಲ್ಯದ ಕ್ಯಾನ್ಸರನ್ನು ಗುಣಪಡಿಸಬಹುದು(childhood cancer is curable) ಎಂಬ ಧ್ಯೇಯ ವಾಕ್ಯವನ್ನಿಟ್ಟು ಸಮಾಜದಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಕೇವಲ 23 ದಿನಗಳಲ್ಲಿ ಮುಂಬೈಯಿಂದ ಮಂಗಳೂರಿಗೆ 950 ಕಿ.ಮೀ ಓಟದಲ್ಲಿ ವಿಶ್ವದಾಖಲೆ ನಿರ್ಮಿಸಿದ ಗಿರೀಶ್ ಶೆಟ್ಟಿ- ರೇಷ್ಮಾ ಗಿರೀಶ್ ಶೆಟ್ಟಿ ದಂಪತಿಯನ್ನು ಅದ್ಧೂರಿ ಮೆರವಣಿಗೆಯ ಮೂಲಕ ಕರೆತರಲಾಯಿತು. ರೂಪ ಅಯ್ಯರ್, ಭಾರತಿ ಬಿ.ಎಂ., ಡಾ. ಆಶಾ ಜ್ಯೋತಿ ರೈ, ಸಚಿತ ನಂದಗೋಪಾಲ್‌ಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಅಪೂರ್ವ ಸಾಧನೆ ಮಾಡುತ್ತಿರುವ ಗಿರೀಶ್ ಶೆಟ್ಟಿ- ರೇಷ್ಮಾ ಗಿರೀಶ್ ಶೆಟ್ಟಿ ದಂಪತಿ, ಕುಮಾರ್ ಅಜ್ವಾನಿ ದಂಪತಿ, ಹರಿದಾಸನ್ ನಾಯರ್ ದಂಪತಿಯನ್ನು ಸನ್ಮಾನಿಸಲಾಯಿತು.