ಸಾರಾಂಶ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ 1,500 ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೌಲ್ಯದ ಪ್ರತಿಭಾ ಪುರಸ್ಕಾರ, 2025ನೇ ಸಾಲಿನ ಡೈರಿ ಬಿಡುಗಡೆ ಕಾರ್ಯಕ್ರಮ ಶನಿವಾರ ಪುರಭವನದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಡುಪಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ 1,500 ವಿದ್ಯಾರ್ಥಿಗಳಿಗೆ 25 ಲಕ್ಷ ರು. ಮೌಲ್ಯದ ಪ್ರತಿಭಾ ಪುರಸ್ಕಾರ, 2025ನೇ ಸಾಲಿನ ಡೈರಿ ಬಿಡುಗಡೆ ಕಾರ್ಯಕ್ರಮ ಶನಿವಾರ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಉದ್ಘಾಟಿಸಿದರು, ಗೀತಾನಂದ ಫೌಂಡೇಶನ್ ಅಧ್ಯಕ್ಷ ಆನಂದ ಸಿ. ಕುಂದರ್ ಪ್ರತಿಭಾ ಪುರಸ್ಕಾರ ವಿತರಿಸಿದರು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ನಿರ್ದೇಶಕಿ ಶ್ಯಾಮಿಲಿ ನವೀನ್ ಡೈರಿ ಬಿಡುಗಡೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸಧೃಡವಾಗಿ ಬೆಳೆದರೆ ಸಮಾಜಕ್ಕೆ ಅಸ್ತಿಯಾಗಲಿದೆ ಎಂಬುದಕ್ಕೆ ಮಹಾಲಕ್ಷ್ಮೀ ಬ್ಯಾಂಕ್ ಸಾಕ್ಷಿಯಾಗಿದೆ ಎಂದರು.ಸಹಕಾರ ರತ್ನ ಪುರಸ್ಕೃತರಾದ ನಾರಾಯಣ ಬಲ್ಲಾಳ್ ಕೊಡವೂರು, ಎಸ್.ಪ್ರಕಾಶ್ಚಂದ್ರ ಶೆಟ್ಟಿ ಉಪ್ಪುಂದ, ಉದಯ ಹಟ್ಟಿಯಂಗಡಿ ಮತ್ತು ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಸನ್ಮಾನಿಸಲಾಯಿತು.ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಜಿಲ್ಲಾ ಸಹಕಾರಿ ಯೂನಿನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ.ಸುವರ್ಣ, ಉದ್ಯಮಿಗಳಾಗ ಆನಂದ ಪಿ. ಸುವರ್ಣ ಮತ್ತು ಅಜಯ್ ಪಿ. ಶೆಟ್ಟಿ ಆಗಮಿಸಿದ್ದರು. ಬ್ಯಾಂಕಿನ ಅಧ್ಯಕ್ಷರು. ನಿರ್ದೇಶಕರು ವೇದಿಕೆಯಲ್ಲಿದ್ದರು.