ನಾಳೆ ಮೀನು ಮಾರಾಟ ಫೆಡರೇಶನ್‌ನಿಂದ 25 ಲಕ್ಷ ರು. ಪ್ರತಿಭಾ ಪುರಸ್ಕಾರ ವಿತರಣೆ

| Published : Feb 06 2025, 11:45 PM IST

ನಾಳೆ ಮೀನು ಮಾರಾಟ ಫೆಡರೇಶನ್‌ನಿಂದ 25 ಲಕ್ಷ ರು. ಪ್ರತಿಭಾ ಪುರಸ್ಕಾರ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 25 ಲಕ್ಷ ರು. ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು ಫೆ.8ರಂದು ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 25 ಲಕ್ಷ ರು. ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು ಫೆ.8ರಂದು ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.ಸಮಾರಂಭವನ್ನು ಕರಾವಳಿ ಕಾವಲು ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್. ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.ಸಂಪನ್ಮೂಲ ವ್ಯಕ್ತಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರೊ. ನಿಕೇತನ ರವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಫೆ.15ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ ಮಾಡುವುದಾಗಿ ಪ್ರಕಟಣೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.