ಕನ್ನಡಪ್ರಭ ವಾರ್ತೆ ಅಥಣಿ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ 21 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆ ಶಾಂತಿಯುತವಾಗಿ ಜರುಗಿದವು. ಒಟ್ಟು 7728 ವಿದ್ಯಾರ್ಥಿಗಳ ಪೈಕಿ 7685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿವಿಧ ಕಾರಣಗಳಿಂದ 43 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಇನ್ನು, ಶಾಲಾ ಅವಧಿಯಲ್ಲಿ ಸರಿಯಾಗಿ ಶಾಲೆಗೆ ಬರದೆ ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದ ಸುಮಾರು 25 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಅಥಣಿ

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ 21 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆ ಶಾಂತಿಯುತವಾಗಿ ಜರುಗಿದವು.

ಒಟ್ಟು 7728 ವಿದ್ಯಾರ್ಥಿಗಳ ಪೈಕಿ 7685 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿವಿಧ ಕಾರಣಗಳಿಂದ 43 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಇನ್ನು, ಶಾಲಾ ಅವಧಿಯಲ್ಲಿ ಸರಿಯಾಗಿ ಶಾಲೆಗೆ ಬರದೆ ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದ ಸುಮಾರು 25 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ಪಟ್ಟಣದ ಸಿಎಸ್‌ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದು, ಈ ಎಲ್ಲ ವಿದ್ಯಾರ್ಥಿಗಳು ಶಾಲೆಯಲ್ಲಿ ನಡೆಸುವ 8 ಕಿರು ಪರೀಕ್ಷೆಗಳಿಗೆ ಹಾಜರಾಗಿಲ್ಲ. ಅಲ್ಲದೇ, 8 ಬಗೆಯ ಕಾರ್ಯಚಟುವಟಿಕೆಗಳನ್ನು ಈ ವಿದ್ಯಾರ್ಥಿಗಳು ಮಾಡಿಲ್ಲ. ಅಲ್ಲದೇ, ಶಾಲೆಗೆ ಕೂಡ ಸಮರ್ಪಕವಾಗಿ ಹಾಜರಾಗಿಲ್ಲ. ಹೀಗಾಗಿ ಇವರ ಹಾಜರಾತಿ ಶೇ.70ಕ್ಕೂ ಅಧಿಕ ಪ್ರಮಾಣದಲ್ಲಿ ಗೈರಾಗಿದ್ದು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದಲೇ ಪ್ರವೇಶ ಪತ್ರ ಬಂದಿಲ್ಲ. ಇನ್ನು ಮುಂದೆ ವಿದ್ಯಾರ್ಥಿಗಳು ಸರಿಯಾಗಿ ಶಾಲೆಗೆ ಹಾಜರಾಗಿ ಹಾಜರಾತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಸಂಸ್ಥೆ ಹೇಳಿದೆ.

ಇನ್ನು, ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ ವೆಬ್ ಕಾಸ್ಟಿಂಗ್ ಕ್ಯಾಮೆರಾ ವ್ಯವಸ್ಥೆ ಅಳವಡಿಸಲಾಗಿತ್ತು. ಅಲ್ಲದೆ, ಪೊಲೀಸ್‌ ಸಿಬ್ಬಂದಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ತಾಲೂಕಿನ 21 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲಾಗಿತ್ತು. ಮೊದಲ ದಿನದ ಪರೀಕ್ಷೆ ಶಾಂತಿಯುತವಾಗಿ ಜರುಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜೆ ತಿಳಿಸಿದ್ದಾರೆ.