ಕೆಆರ್‌ಎಸ್‌ ಜಲಾನಯದಿಂದ 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

| Published : Jul 20 2024, 12:51 AM IST

ಸಾರಾಂಶ

ನೀರು ಬಿಡುಗಡೆಯ ಪ್ರಮಾಣ ಮುಂದೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಆಸ್ತಿ ಮತ್ತು ಜಾನುವಾರುಗಳನ್ನು ರಕ್ಷಿಸಿಕೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚು ನೀರು ಹರಿದುಬರುತ್ತಿದ್ದು, ಜಲಾಶಯದಿಂದ 10 ಸಾವಿರ ಕ್ಯುಸೆಕ್‌ನಿಂದ 25 ಸಾವಿರ ಕ್ಯುಸೆಕ್‌ಗೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿ ಬಿಡಲಾಗುವುದು ಎಂದು ಕೆಆರ್‌ಎಸ್‌ ಜಲಾಶಯದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆ ಹೊರಡಿಸಿದ್ದಾರೆ. ನೀರು ಬಿಡುಗಡೆಯ ಪ್ರಮಾಣ ಮುಂದೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಆಸ್ತಿ ಮತ್ತು ಜಾನುವಾರುಗಳನ್ನು ರಕ್ಷಿಸಿಕೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ಸೂಚನೆ ನೀಡಿದ್ದಾರೆ.ಕೆಆರ್ ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ

ಇಂದಿನ ಮಟ್ಟ – 118.10 ಅಡಿ

ಒಳ ಹರಿವು – 46,165 ಕ್ಯುಸೆಕ್

ಹೊರ ಹರಿವು – 2732 ಕ್ಯುಸೆಕ್

ನೀರಿನ ಸಂಗ್ರಹ – 40.688 ಟಿಎಂಸಿಬೋಟಿಂಗ್ ಸ್ಥಗಿತಶ್ರೀರಂಗಪಟ್ಟಣ:

ಕಾವೇರಿ ಕೊಳ್ಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿರುವುದರಿಂದ ಯಾವದೇ ಸಮಯದಲ್ಲಾದರೂ ನೀರನ್ನು ನದಿಗೆ ಹೊರ ಬಿಡುವುದರಿಂದ ಶ್ರೀರಂಗಪಟ್ಟಣದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲಿದ್ದು, ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ನಿಷೇಧಿಸಲಾಗಿದೆ.ಯಾವುದೇ ಸಮಯದಲ್ಲಾದರೂ ಅಣೆಕಟ್ಟೆಯಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವುದರಿಂದ ಬೋಟಿಂಗ್ ಸ್ಥಗಿತ ಗೊಳಿಸಲಾಗಿದೆ. ಜನ ಜಾನುವಾರುಗಳು ನದಿ ದಂಡೆಯ ಬಳಿ ತೆರಳದಂತೆ ತಾಲೂಕು ಆಡಳಿತದಿಂದ ಎಚ್ಚರಿಕೆ ನೀಡಿದೆ.