ಸಾರಾಂಶ
 ಈ ಬಾರಿ ನಡೆಯಲಿರುವ 70ನೇ ಕನ್ನಡ ರಾಜ್ಯೋತ್ಸವದ ವಿಶೇಷ ಆಕರ್ಷಣೆಯೆಂದರೆ 2500 ಅಡಿ ಉದ್ದದ ಬೃಹತ್ ಕನ್ನಡ ಧ್ವಜ. ನವೆಂಬರ್ 1 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮೆರವಣಿಗೆ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಹಾಸನ
ಕನ್ನಡ ನಾಡಿನ ಆತ್ಮಗೌರವ ಮತ್ತು ಏಕತೆಯ ಸಂಕೇತವಾಗಿ, ಈ ವರ್ಷದ ರಾಜ್ಯೋತ್ಸವ ದಿನದಂದು ನಮ್ಮ ಹಾಸನ ಟಿವಿ 5ನೇ ವರ್ಷದ ಸಂಭ್ರಮದ ಅಂಗವಾಗಿ ಜಿಲ್ಲಾಡಳಿತದ ಸಹಯೋಗದಲ್ಲಿ ಪ್ರಥಮ ಬಾರಿಗೆ 2500 ಅಡಿ ಉದ್ದದ ಕನ್ನಡ ಧ್ವಜ ಮೆರವಣಿಗೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಪಾದಕ ತೌಫಿಕ್ ಅಹಮದ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನಡೆಯಲಿರುವ 70ನೇ ಕನ್ನಡ ರಾಜ್ಯೋತ್ಸವದ ವಿಶೇಷ ಆಕರ್ಷಣೆಯೆಂದರೆ 2500 ಅಡಿ ಉದ್ದದ ಬೃಹತ್ ಕನ್ನಡ ಧ್ವಜ. ನವೆಂಬರ್ 1 ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಮೆರವಣಿಗೆ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ ಎಂದು ಹೇಳಿದರು. ವಿವಿಧ ಶಾಲಾ ಮತ್ತು ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಕನ್ನಡ ನಾಡಿನ ಗೌರವ, ನುಡಿ ಹಾಗೂಸಂಸ್ಕ್ರತಿಯ ಪ್ರತಿಬಿಂಬವಾಗಿ ಈ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿಗಳು ಹೆಜ್ಜೆ ಹಾಕಲಿದ್ದಾರೆ. ಮೆರವಣಿಗೆಯಲ್ಲಿ ಕನ್ನಡಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು, ಮಹಿಳಾ ಸಹಕಾರ ಸಂಘಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ಈ ಬೃಹತ್ ಧ್ವಜ ನಡಿಗೆ ರಾಜ್ಯೋತ್ಸವದ ಉತ್ಸಾಹಕ್ಕೆ ಹೊಸ ಚೈತನ್ಯ ನೀಡಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಕೀಲ್ ಅಹಮದ್, ಸೈಯದ್ ತಾಜ್, ಗುರುಪ್ರಸಾದ್ ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))