ಸಾರಾಂಶ
ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ನೋಂದಾವಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಮುಂದೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ನೂತನ ಸದಸ್ಯರನ್ನು ಪಕ್ಷಕ್ಕೆ ನೋಂದಾವಣಿ ಮಾಡುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಮಾಜಿ ಅಧ್ಯಕ್ಷ ಟಿ. ಮಂಜುನಾಥ ತಿಳಿಸಿದರು.
ಚಳ್ಳಕೆರೆ: ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ನೋಂದಾವಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಮುಂದೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ನೂತನ ಸದಸ್ಯರನ್ನು ಪಕ್ಷಕ್ಕೆ ನೋಂದಾವಣಿ ಮಾಡುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಮಾಜಿ ಅಧ್ಯಕ್ಷ ಟಿ. ಮಂಜುನಾಥ ತಿಳಿಸಿದರು.
ಅವರು, ನಗರದ ಮಹಾದೇವಿ ರಸ್ತೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ನಗರ ಹಾಗೂ ಗ್ರಾಮೀಣ ಪ್ರದೇಶದ ಮನೆ, ಮನೆಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ತೆರಳಿ ಸದಸ್ಯತ್ವ ನೊಂದಾವಣೆ ಕಾರ್ಯವನ್ನು ಆರಂಭಿಸಿದ್ದಾರೆ ಎಂದು ತಿಳಿಸಿದರು.ಜಿಲ್ಲೆಯ ನೂತನ ಬಿಜೆಪಿ ಸದಸ್ಯರ ನೋಂದಾವಣೆ ಕಾರ್ಯಕ್ಕೆ ಸಂಸದ ಗೋವಿಂದ ಎಂ. ಕಾರಜೋಳ ಈಗಾಗಲೇ ಚಾಲನೆ ನೀಡಿದ್ದಾರೆ. ಪಕ್ಷದ ಎಲ್ಲಾ ಹಂತದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸದಸ್ಯತ್ವ ಅಭಿಯಾನಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದರು. ಬಿಜೆಪಿ ಯುವ ಮುಖಂಡ, ಪುರಸಭೆ ಮಾಜಿ ಉಪಾಧ್ಯಕ್ಷ ಎಂ.ಎಸ್. ಶ್ರೀನಿವಾಸ್, ನಾಗರಾಜು, ಭರತ್(ಚಿನ್ನು) ತಿಪ್ಪೇಸ್ವಾಮಿ, ಗೋಪನಹಳ್ಳಿ ಲಿಂಗರಾಜು, ದಯಾನಂದ, ಪೃಥ್ವಿ, ಆದರ್ಶ, ಭರತ್ ಮುಂತಾದವರು ಉಪಸ್ಥಿತರಿದ್ದರು.