25ನೇ ವರ್ಷದ “ರೋಟರಿ ಚಿಣ್ಣರ ಉತ್ಸವ” ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ನ.30ರಂದು ಬೆಳಗ್ಗೆ 9ರಿಂದ ಉರ್ವ ಕೆನರಾ ಹೈಸ್ಕೂಲ್ ಪ್ರಾಂಗಣದಲ್ಲಿ ಆಯೋಜಿಸಲಾಗಿದೆ.

ಮಂಗಳೂರು: ರೋಟರಿ ಮಂಗಳೂರು ಸೆಂಟ್ರಲ್, ರೋಟರ‍್ಯಾಕ್ಟ್ ಮಂಗಳೂರು ಸಿಟಿ ಸಂಯುಕ್ತ ಆಶ್ರಯದಲ್ಲಿ 25ನೇ ವರ್ಷದ “ರೋಟರಿ ಚಿಣ್ಣರ ಉತ್ಸವ” ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ನ.30ರಂದು ಬೆಳಗ್ಗೆ 9ರಿಂದ ಉರ್ವ ಕೆನರಾ ಹೈಸ್ಕೂಲ್ ಪ್ರಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನಾ ಸಮಿತಿ ಅಧ್ಯಕ್ಷ ಡಾ.ದೇವದಾಸ್‌ ರೈ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ದಿನವಿಡಿ ನಡೆಯುವ ಕ್ರೀಡಾ ಸ್ಪರ್ಧಾಕೂಟ ಮತ್ತು ಮನೋರಂಜನಾ ಉತ್ಸವದಲ್ಲಿ ಜಿಲ್ಲೆಯ ವಿವಿಧ 10 ಮಕ್ಕಳ ರಕ್ಷಣಾ ಮತ್ತು ಆರೈಕೆ ಕೇಂದ್ರಗಳಿಂದ ಸುಮಾರು 434 ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆ ಮತ್ತು ಕಲಾ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ ಎಂದರು.

ಸ್ಪರ್ಧಾಕೂಟವನ್ನು ಹೆಸರಾಂತ ಸಂಗೀತ ನಿರ್ದೇಶಕ, ನಟ ಡಾ. ಗುರುಕಿರಣ್ ಉದ್ಘಾಟಸಲಿದ್ದಾರೆ. ವಲಯ-2, ರೋಟರಿ ಜಿಲ್ಲಾ 3181 ಸಹಾಯಕ ಗವರ್ನರ್ ಚಿನ್ನಗರಿಗೌಡ ಮತ್ತು ವಲಯ ಸೇನಾನಿ ರವಿ ಜಲನ್‌ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆ ಅಧ್ಯಕ್ಷ ಭಾಸ್ಕರ್‌ ರೈ ಕಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.ಸಮಾರೋಪ ಸಮಾರಂಭವು ನಗರದ ಉರ್ವ ಕೆನರಾ ಹೈಸ್ಕೂಲ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಜರುಗಲಿದೆ. ರೋಟರಿ ಜಿಲ್ಲೆ 3181ರ ಚುನಾಯಿತ ಗವರ್ನರ್ ಸತೀಶ್ ಬೋಳಾರ್‌ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಸ್ಪರ್ಧಾ ವಿಜೇತರಿಗೆ ಬಹುಮಾನ ಹಾಗೂ ಸರ್ವಾಂಗೀಣ ಪ್ರದರ್ಶನ ನೀಡಿದ ಮಕ್ಕಳ ರಕ್ಷಣಾ ಮತ್ತು ಆರೈಕೆ ಕೇಂದ್ರಕ್ಕೆ ಪ್ರಶಸ್ತಿ ಫಲಕ ಪ್ರದಾನ ಮಾಡಲಿದ್ದಾರೆ ಎಂದರು.ರೋಟರಿ ಮಂಗಳೂರು ಸೆಂಟ್ರಲ್‌ ಸಂಸ್ಥೆಯ ಅಧ್ಯಕ್ಷ ಭಾಸ್ಕರ್‌ ರೈ ಕಟ್ಟ, ಕಾರ್ಯದರ್ಶಿ ವಿಕಾಸ್‌ ಕೋಟ್ಯಾನ್‌, ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ, ರೋಟರ್‍ಯಾಕ್ಟ್‌ ಕ್ಲಬ್‌ ಮಂಗಳೂರು ಸಿಟಿ ಅಧ್ಯಕ್ಷ ಅಕ್ಷಯ್‌ ರೈ ಇದ್ದರು.