ಸಾರಾಂಶ
- ಡಾ. ಗೋಪಾಲಕೃಷ್ಣ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆ. 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ಎಲ್ಲ ಉದ್ಯೋಗಕಾಂಕ್ಷಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಕರೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಮಂಗಳವಾರ ನಡೆದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಉದ್ಯೋಗ ಮೇಳಕ್ಕೆ ಜಿಲ್ಲೆಯಲ್ಲಿರುವ ಉದ್ಯೋಗಾಕಾಂಕ್ಷಿಗಳನ್ನು ಹೆಚ್ಚಿನ ರೀತಿಯಲ್ಲಿ ಸಜ್ಜುಗೊಳಿಸಲು ಇಲಾಖೆಯಿಂದ ಸೃಜನೆ ಮಾಡಿರುವ ಸ್ಕಿಲ್ ಕನೆಕ್ಟ್ ಪೋರ್ಟಲ್ ಮುಖಾಂತರ ನೋಂದಣಿ ಮಾಡಿಸಬೇಕಾಗುತ್ತದೆ ಎಂದ ಅವರು. ಸದರಿ ಉದ್ಯೋಗ ಮೇಳವು ಸಂಪೂರ್ಣವಾಗಿ ಡಿಜಿಟಲೀಕರಣದ ಕಾರಣ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಉದ್ಯೋಗ ವಿನಿಮಯ ಕಚೇರಿ ಹಾಗೂ ವಿವಿಧ ಸೇವಾ ವಲಯಗಳ ಉದ್ಯೋಗದಾತರನ್ನು ನೋಂದಣಿ ಮಾಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಎಲ್ಲ ರೀತಿಯ ವಿದ್ಯಾರ್ಹತೆ ಹೊಂದಿರುವವರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಹಾಗೂ ಪದವಿ ಪೂರೈಸಿದ ನಂತರ ಕೌಶಲ್ಯ ತರಬೇತಿ ಪಡೆಯಲು ಅನುಕೂಲವಾಗಲಿದೆ ಎಂದರು.
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸ್ವ ಸಹಾಯ ಸಂಘಗಳು ಸರ್ಕಾರಿ ಕಚೇರಿ ಎಲ್ಲ ಸಾಮಾಜಿಕ ಮಾಧ್ಯಮ ಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ ಮತ್ತು ಸಮುದಾಯದ ಸಂಪನ್ಮೂಲ ವ್ಯಕ್ತಿಗಳು ಶಾಲಾ ಕಾಲೇಜ್, ಅಂಗನ ವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ಪ್ರಚಾರ ಕೈಗೊಂಡು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಯಶಸ್ವಿ ಯಾಗಲು ಎಲ್ಲ ಇಲಾಖೆಗಳ ಅಧಿಕಾರಿಗಳು ನಿಗಾ ವಹಿಸಿ ತಮ್ಮ ಕರ್ತವ್ಯ ಮಾಡಬೇಕು ಎಂದು ಹೇಳಿದರು.ಬಿಸಿಎಂ ಉಪ ನಿರ್ದೇಶಕ ಎಸ್.ಟಿ. ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜ್ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ್ ಯುವ ಸಮೃದ್ಧಿ ಮೇಳದ ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು. 13 ಕೆಸಿಕೆಎಂ 3