27, 28ರಂದು ದಾವಿವಿ ಮಟ್ಟದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ

| Published : Jun 26 2024, 12:37 AM IST

27, 28ರಂದು ದಾವಿವಿ ಮಟ್ಟದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟ
Share this Article
  • FB
  • TW
  • Linkdin
  • Email

ಸಾರಾಂಶ

ನ್ಯಾಮತಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ.ಸಿ. ಭಾರತಿ ಹೇಳಿದ್ದಾರೆ.

- ಶಾಸಕರಿಂದ ಸಮಾರಂಭ ಉದ್ಘಾಟನೆ: ಡಾ.ಭಾರತಿ- - - ನ್ಯಾಮತಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ.ಸಿ. ಭಾರತಿ ಹೇಳಿದರು.

ನ್ಯಾಮತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕ್ರೀಡಾಕೂಟದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2023- 2024ನೇ ಸಾಲಿನ ಕ್ರೀಡಾಕೂಟವು ಜೂನ್‌ 27 ಮತ್ತು 28ರಂದು ನಡೆಯಲಿದೆ. ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಲಿದೆ. ಕ್ರೀಡಾಕೂಟದಲ್ಲಿ ಸುಮಾರು 600 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜೂ.27ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ಜಿ.ಶಾಂತನಗೌಡ ಕ್ರೀಡಾಕೂಟ ಸಮಾರಂಭ ಉದ್ಘಾಟಿಸಲಿದ್ದಾರೆ. ನ್ಯಾಮತಿ ಸರ್ಕಾರಿ ಕಾಲೇಜು ಪ್ರಾಂಶುಪಾಲರಾದ ಡಾ. ಟಿ.ಸಿ. ಭಾರತಿ ಅಧ್ಯಕ್ಷತೆ ವಹಿಸುವರು, ದಾವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ವೆಂಕಟೇಶ್‌, ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಅಧ್ಯಕ್ಷ ಎಚ್‌.ತಿಪ್ಪೇಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.

ಜೂ.28ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಪ್ರಾಂಶುಪಾಲರಾದ ಡಾ. ಟಿ.ಸಿ. ಭಾರತಿ ಅಧ್ಯಕ್ಷತೆ ವಹಿಸುವರು. ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಉಪಾಧ್ಯಕ್ಷ ಡಾ. ಸಿ.ಶಂಕರಪ್ಪ ಅತಿಥಿಗಳಾಗಿ ಆಗಮಿಸುವರು ಎಂದರು.

ಸಭೆಯಲ್ಲಿ ಡಾ. ಜಿ.ಆರ್‌. ರಾಜಶೇಖರ್‌, ಜಿ.ಪಿ.ರಾಘವೇಂದ್ರ, ಸೈಯದ್‌ ಇಮ್ರಾನ್‌ ತಾಸೀರ್‌, ಎಂ.ಬಿ.ರೇವಣಸಿದ್ದಪ್ಪ ಇತರರು ಉಪಸ್ಥಿತರಿದ್ದರು.