ಮಲಬಾರ್‌ ಗೋಲ್ಡ್‌ನಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರು. ವಿದ್ಯಾರ್ಥಿ ವೇತನ ವಿತರಣೆ

| Published : Feb 26 2025, 01:05 AM IST

ಮಲಬಾರ್‌ ಗೋಲ್ಡ್‌ನಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರು. ವಿದ್ಯಾರ್ಥಿ ವೇತನ ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ 45 ಕಾಲೇಜುಗಳ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರು. ಮೊತ್ತದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಅಜ್ಜರಕಾಡು ಟೌನ್‌ಹಾಲ್‌ನಲ್ಲಿ ಮಂಗಳವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ 45 ಕಾಲೇಜುಗಳ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರು. ಮೊತ್ತದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಅಜ್ಜರಕಾಡು ಟೌನ್‌ಹಾಲ್‌ನಲ್ಲಿ ಮಂಗಳವಾರ ನಡೆಯಿತು.ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಿ, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆ ಸ್ತುತ್ಯರ್ಹವಾದ ಕೆಲಸವನ್ನು ಮಾಡುತ್ತಿದೆ. ನಮ್ಮೂರಿನ ಗ್ರಾಮೀಣ ಭಾಗ ಮತ್ತು ಸಂಕಷ್ಟದಲ್ಲಿದ್ದ ಅರ್ಹ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಿರುವುದು ಸಂಸ್ಥೆಯ ಸಾಮಾಜಿಕ ಕಳಕಳಿಯನ್ನು ತೋರಿಸುತ್ತದೆ ಎಂದರು.ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮುಖ್ಯಸ್ಥ ಹಫೀಜ್ ರೆಹಮಾನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಉಡುಪಿ ಜಿಲ್ಲೆಯ 328 ವಿದ್ಯಾರ್ಥಿನಿಯರಿಗೆ ಒಟ್ಟು 28 ಲಕ್ಷ ರು. ವಿದ್ಯಾರ್ಥಿ ವೇತನವನ್ನು ವಿತರಿಸಲಾಗಿದೆ. ಕಳೆದ 7 ವರ್ಷಗಳಲ್ಲಿ 1500 ಕ್ಕೂ ಅಧಿಕ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ನೀಡಿರುವ ಸಂತೃಪ್ತಿ ನಮ್ಮದ್ದು. ಕಳೆದ 2 ವರ್ಷದಿಂದ ಜಿಲ್ಲೆಯಲ್ಲಿ ಬೆಳಗ್ಗಿನ ತಿಂಡಿ-ತಿನಿಸುಗಳ ಪ್ಯಾಕೇಟ್‌ಯನ್ನು ಹಂಚುತ್ತಿದ್ದೇವೆ ಎಂದರು.ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಮೊಹಮ್ಮದ್ ಮೌಲಾ, ಸಾಫಲ್ಯ ಟ್ರಸ್ಟ್‌ನ ಪ್ರವರ್ತಕಿ ನಿರುಪಮಾ ಪ್ರಸಾದ್ ಶೆಟ್ಟಿ, ಧರ್ಮಗುರು ಫಾ. ವಿಲಿಯಂ ಮಾರ್ಟಿಸ್, ಘಮ್ಯರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ವೆಂಕಟೇಶ್ ಪೈ, ಸಾಮಾಜಿಕ ಕಾರ್ಯಕರ್ತರಾದ ಮಮತಾ ಶೆಟ್ಟಿ, ರೇಷ್ಮಾ ತೋಟ ಉಪಸ್ಥಿತರಿದ್ದರು.ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಸಿಎಸ್‌ಆರ್ ನಿಧಿ ಕರ್ನಾಟಕ ಪ್ರಾದೇಶಿಕ ಮುಖ್ಯಸ್ಥ ಹೈದರ್ ಕೆ., ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ, ಜಿಆರ್‌ಎಂ ರಾಘವೇಂದ್ರ ನಾಯಕ್ ಅಜೆಕಾರು, ಸೇಲ್ಸ್ ಮ್ಯಾನೇಜರ್ ಮುಸ್ತಾಫಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಸಹಕರಿಸಿದರು. ವಿಘ್ನೇಶ್ ಸನ್ಮಾನಿತರ ಪಟ್ಟಿಯನ್ನು ವಾಚಿಸಿದರು.