ವಿವಿಧ ನ್ಯಾಯಾಲಯಗಳಿಂದ ಒಟ್ಟು 280 ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಿದ ನ್ಯಾಯಾಧೀಶರು 9,49,48,426 ರು.ಗಳನ್ನು ಕಕ್ಷಿದಾರರಿಗೆ ಪರಿಹಾರ ನೀಡಲು ಆದೇಶ ನೀಡಿದರು. ಐಪಿಸಿ 148, ಚೆಕ್ ಬೌನ್ಸ್ 49, 50 ಅಪಘಾತ ಪ್ರಕರಣ 34 ಸಿವಿಲ್ ಪ್ರಕರಣ ಒಳಗೊಂಡಂತೆ 280 ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ.
ಕನ್ನಡಪ್ರಭ ವಾರ್ತೆ ಮದ್ದೂರು
ಜೆಎಂಎಫ್‌ಸಿ ನ್ಯಾಯಾಲಯ ಸೇರಿದಂತೆ ಅಧೀನ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 280 ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಿದ ನ್ಯಾಯಾಧೀಶರು ₹9.49 ಲಕ್ಷಕ್ಕೂ ಮೀರಿ ಪರಿಹಾರಕ್ಕೆ ಆದೇಶ ನೀಡಿದರು.ರಾಷ್ಟ್ರೀಯ, ರಾಜ್ಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ವಿವಿಧ ನ್ಯಾಯಾಲಯಗಳಿಂದ ಒಟ್ಟು 280 ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥಪಡಿಸಿದ ನ್ಯಾಯಾಧೀಶರು 9,49,48,426 ರು.ಗಳನ್ನು ಕಕ್ಷಿದಾರರಿಗೆ ಪರಿಹಾರ ನೀಡಲು ಆದೇಶ ನೀಡಿದರು. ಐಪಿಸಿ 148, ಚೆಕ್ ಬೌನ್ಸ್ 49, 50 ಅಪಘಾತ ಪ್ರಕರಣ 34 ಸಿವಿಲ್ ಪ್ರಕರಣ ಒಳಗೊಂಡಂತೆ 280 ಪ್ರಕರಣಗಳನ್ನು ರಾಜೀಸಂಧಾನದ ಮೂಲಕ ಇತ್ಯರ್ಥ ಪಡಿಸಿದರು.
ಈ ವೇಳೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್ ಹರಿಣಿ, ಒಂದನೇ ಅಪರ ಹಿರಿಯ ನ್ಯಾಯಾಧೀಶರಾದ ಎನ್.ಬಿ.ಮೋಹನ್ ಕುಮಾರಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಿ.ಎಂ.ಪಾರ್ವತಿ, 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಕೆ.ಗೋಪಾಲಕೃಷ್ಣ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಎಸ್.ಆರ್.ನಂದಿನಿ , 3ನೇ ಅಪರ ಸೇವೆ ನ್ಯಾಯಾಧೀಶರಾದ ಎಂ.ಶೃತಿ ಅವರು ತಮ್ಮ ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿದ್ದ ಪ್ರಕರಣಗಳ ಬಗ್ಗೆ ರಾಜೀಸಂಧಾನದ ಮೂಲಕ ಕಕ್ಷಿದಾರರಿಗೆ ಮನವರಿಕೆ ಮಾಡಿ ಪ್ರಕರಣ ಇತ್ಯರ್ಥ ಪಡಿಸಿದರು.ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಮ್ ದೇವಿಡ್, ಕಪನಿ ನಂಜೇಶ್ವರ, ವಕೀಲರ ಸಂಘದ ಅಧ್ಯಕ್ಷ ಎಂ. ಎನ್.ಶಿವಣ್ಣ, ಉಪಾಧ್ಯಕ್ಷ ಪುಟ್ಟರಾಜು, ಪ್ರಧಾನ ಕಾರ್ಯದರ್ಶಿ ಎಂ.ಜೆ.ಸುಮಂತ್ ಸೇರಿದಂತೆ ಹಲವರು ಇದ್ದರು.
ನಾಳೆ ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕಾರಮಂಡ್ಯ: ಲೋಕಾಯುಕ್ತ ಅಧಿಕಾರಿಗಳಿಂದ ತಾಲೂಕು ಕಚೇರಿ ಆವರಣದಲ್ಲಿ ಸೆ.23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1:30 ಗಂಟೆವರೆಗೆ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು/ಅಹವಾಲು ಸ್ವೀಕಾರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕಾರ ಮಾಡಲಿದ್ದಾರೆ. ಲೋಕಾಯುಕ್ತ ವಿಭಾಗದ ಅಧಿಕಾರಿಗಳಾದ ಡಿವೈಎಸ್ಪಿ ಸುನೀಲ್ ಕುಮಾರ್.ಎಚ್.ಟಿ, ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ.ಬಿ.ಪಿ. ರವಿಕುಮಾರ್.ಎಂ. ಲೇಪಾಕ್ಷ ಮೂರ್ತಿ.ಆರ್.ಜಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಸರ್ಕಾರಿ ಮತ್ತು ಅರೆಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರುಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು/ಅಹವಾಲುಗಳೇನಾದರೂ ಇದ್ದಲ್ಲಿ ಸ್ವೀಕರಿಸಲಾಗುವುದು ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.