ಸಾರಾಂಶ
ಕಾಲ ಜ್ಞಾನಿಯಾಗಿದ್ದ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ‘17ನೇ ಶತಮಾನದಲ್ಲಿ ಜೀವಿಸಿದ್ದ ಕೈವಾರ ತಾತಯ್ಯ ಅವರು ಪವಾಡ ಪುರುಷರಾಗಿದ್ದರು. ತಾತಯ್ಯ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲ ಸಮಾಜಗಳು ಸ್ಮರಿಸಿಕೊಳ್ಳಬೇಕಿದೆ
ಕನ್ನಡಪ್ರಭ ವಾರ್ತೆ ಮೈಸೂರು
ಮಹನೀಯರ ಜಯಂತಿಗಳು ಆಚರಣೆಗಷ್ಟೆ ಸೀಮಿತವಾಗದೆ ಅವರ ಆದರ್ಶ ತತ್ವಗಳನ್ನು ನಾವು ಮೈಗೂಡಿಸಿಕೊಂಡು ಅರ್ಥಪೂರ್ಣಗೊಳಿಸಬೇಕು. ಜೀವನ ಸಾರ್ಥಕತೆಗಾಗಿ ಸಮಾಜದ ಒಳಿತಿಗೆ ಶ್ರಮಿಸುವ ಮೂಲಕ ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಶಾಸಕ ಕೆ. ಹರೀಶ್ ಗೌಡ ಹೇಳಿದರು.ಡಿ ದೇವರಾಜ ಅರಸು ರಸ್ತೆಯಲ್ಲಿ ಶ್ರೀ ಕೈವಾರ ತಾತಯ್ಯ ಬಣಜಿಗ (ಬಲಿಜ) ಶ್ರೀ ಯೋಗಿ ನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಅವರ 298ನೇ ಜಯಂತ್ಯುತ್ಸವದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ತ್ರಿಕಾಲ ಜ್ಞಾನಿಯಾಗಿದ್ದ ಕೈವಾರ ತಾತಯ್ಯ ಅವರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು ಮನುಕುಲದ ಒಳಿತಿಗಾಗಿ ಅಪಾರ ಕೊಡುಗೆ ನೀಡಿದ್ದಾರೆ. ‘17ನೇ ಶತಮಾನದಲ್ಲಿ ಜೀವಿಸಿದ್ದ ಕೈವಾರ ತಾತಯ್ಯ ಅವರು ಪವಾಡ ಪುರುಷರಾಗಿದ್ದರು. ತಾತಯ್ಯ ಅವರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೆ ಎಲ್ಲ ಸಮಾಜಗಳು ಸ್ಮರಿಸಿಕೊಳ್ಳಬೇಕಿದೆ ಎಂದರು.ಸಂಘದ ಗೌರವಾಧ್ಯಕ್ಷ ಆನಂದ್ ಶೆಟ್ಟಿ ಮಾತನಾಡಿ, ತಾತಯ್ಯ ಅವರು ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ. ಕೈವಾರ ಕ್ಷೇತ್ರ ಬಹಳ ಪವಿತ್ರವಾದದ್ದು ಹಾಗೂ ಧಾರ್ಮಿಕ ಪ್ರವಾಸಿ ತಾಣವೂ ಆಗಿದೆ ಎಂದರು.
ಕಾರ್ಯದರ್ಶಿ ಕೆ. ಉಮೇಶ್, ಸಂಘದ ಗೌರವಾಧ್ಯಕ್ಷ ಆನಂದ್ ಶೆಟ್ಟಿ , ನರೇಶ್ ಬಾಬು, ಪ್ರಕಾಶ್, ಉಮೇಶ್, ಯತಿರಾಜ್, ನಗರಪಾಲಿಕೆ ಮಾಜಿ ಸದಸ್ಯ ಪ್ರಶಾಂತ್ ಗೌಡ, ಮೈ.ಕಾ. ಪ್ರೇಮ್ ಕುಮಾರ್, ಎಂಡಿಎ ಮಾಜಿ ಸದಸ್ಯರಾದ ನವೀನ್ ಕುಮಾರ್, ಕರ್ನಾಟಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ವಿನಯ್ ಕುಮಾರ್, ರಮೇಶ್ , ರಾಜೀವ್, ಗುರುರಾಜ್ ಶೆಟ್ಟಿ, ಎಸ್.ಎನ್. ರಾಜೇಶ್, ಪ್ರಮೋದ್ ಗೌಡ, ರವಿಚಂದ್ರ, ಜಿ. ರಾಘವೇಂದ್ರ, ಕೃಷ್ಣಮೂರ್ತಿ, ಸಂತೋಷ್ ನಾಯ್ಡು ಭಾಗವಹಿಸಿದ್ದರು.