29ರಂದು ‘ವಿಶ್ವಮಾನವ ದಿನಾಚರಣೆ’<bha>;</bha> ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ

| Published : Dec 27 2023, 01:30 AM IST / Updated: Dec 27 2023, 01:31 AM IST

29ರಂದು ‘ವಿಶ್ವಮಾನವ ದಿನಾಚರಣೆ’<bha>;</bha> ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಡಿಸೆಂಬರ್ 29 ರಂದು ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅಧ್ಯಕ್ಷತೆ ವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಇದೇ ಡಿಸೆಂಬರ್, 29 ರಂದು ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

ನಗರದ ಮಂಗೇರಿರ ಮುತ್ತಣ್ಣ ವೃತ್ತದ ಬಳಿ ಇರುವ ‘ಕುವೆಂಪು ಪ್ರತಿಮೆ’ಗೆ ಮಾಲಾರ್ಪಣೆ ಮಾಡಿ ನಂತರ ಸಭಾ ಕಾರ್ಯಕ್ರಮವು ಗಾಂಧಿ ಭವನದಲ್ಲಿ ನಡೆಯಲಿದ್ದು, ನಿಯಮಾನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ .ರಮೇಶ್, ಕುವೆಂಪು ಅವರು ವಿಶ್ವಮಾನವರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವೈಚಾರಿಕ ನೆಲೆಗಟ್ಟಿನಲ್ಲಿ ವಿಶ್ವಮಾನವ ದಿನಾಚರಣೆ ಬೆಳಕು ಚೆಲ್ಲುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಕೊಡಗು ಜಿಲ್ಲಾ ಜಾನಪದ ಪರಿಷತ್‌ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ ಕುವೆಂಪು ಅವರ ಚಿಂತನೆ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕುವೆಂಪು ಗೀತೆಗಳನ್ನು ಹಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿ ಕುವೆಂಪು ಜನ್ಮ ದಿನದಂದು ಕುವೆಂಪು ಅವರ ಪುತ್ಥಳಿಗೆ ದೀಪಾಲಂಕಾರ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಪ್ರಮುಖರಾದ ರವಿಗೌಡ, ಪ್ರಕಾಶ್ ಆಚಾರ್ಯ, ರಾಜಶೇಖರ್, ಇತರರು ಇದ್ದರು.

ಜನವರಿ 1 ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ: ಜನವರಿ 1ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ನಗರದ ಗಾಂಧಿ ಭವನದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.

ಅಮರಶಿಲ್ಪಿ ಜಕಣಾಚಾರಿ ಅವರು ಕನ್ನಡ ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಸ್ಮರಣೆ ಮಾಡುವಂತಾಗಬೇಕು. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜಿಸಲು ಅಗತ್ಯ ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.

ಅಮರಶಿಲ್ಪಿ ಜಕಣಾಚಾರಿ ಸಂಬಂಧಿಸಿದಂತೆ ಡಾಕ್ಯುಮೆಂಟ್ರಿ ಇದ್ದಲ್ಲಿ ಪ್ರದರ್ಶನಕ್ಕೆ ಅವಕಾಶ ಮಾಡುವಂತೆ ಬಿ.ಜಿ.ಅನಂತಶಯನ ಅವರು ಸಲಹೆ ಮಾಡಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಮಕ್ಕಳ ಪ್ರತಿಭೆಗೆ ಅವಕಾಶ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷರಾದ ಜಗದೀಶ್, ಚರಣ್, ಸುರೇಶ್, ರಕ್ಷಿತ್, ಪ್ರಕಾಶ್ ಆಚಾರ್ಯ, ಇತರರು ಇದ್ದರು.