ಭತ್ಯೆಗಳ ಹೆಸರಿನಲ್ಲಿ ₹3.50 ಕೋಟಿ ಅವ್ಯವಹಾರ: ಗಡಾದ ಆರೋಪ

| Published : Mar 07 2025, 12:45 AM IST

ಭತ್ಯೆಗಳ ಹೆಸರಿನಲ್ಲಿ ₹3.50 ಕೋಟಿ ಅವ್ಯವಹಾರ: ಗಡಾದ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಲ್ಲಿ ಅಂಕಿತಾಧಿಕಾರಿ ಮತ್ತು ಆಹಾರ ಸುರಕ್ಷಾಧಿಕಾರಿಯಾಗಿ ಕಾರ್ಯಕಾರಿ ಹುದ್ದೆಗಳಿಗೆ ನಿಯೋಜನೆಗೊಂಡು ಸೇವೆ ಸಲ್ಲಿಸುತ್ತಿದ್ದ 36 ಜನ ವೈದ್ಯರು ನಿಯಮ ಬಾಹೀರವಾಗಿ ₹3.50 ಕೋಟಿ ವಿವಿಧ ಭತ್ಯೆಗಳ ರೂಪದಲ್ಲಿ ಸರ್ಕಾರದ ಖಜಾನೆಯಿಂದ ಪಾವತಿಸಿಕೊಂಡಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭತ್ಯೆ ಹಾಗೂ ವಿಶೇಷ ಭತ್ಯೆಗಳನ್ನು ಪಡೆಯಲು ನಿಯಮಾವಳಿಗಳಲ್ಲಿ ಅವಕಾಶ ಇಲ್ಲದಿದ್ದರೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021ರ ಉಪ ನಿಯಮಗಳನ್ನು ಉಲ್ಲಂಘಿಸಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ನಷ್ಟ ಉಂಟು ಮಾಡಿದ್ದಾರೆ. ಇವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸದ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೇ ಕರ್ತವ್ಯಲೋಪವೆಸಗಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರದ ಖಜಾನೆಗೆ ಅಪಾರ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದ್ದರೂ ಇವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿಲ್ಲ. ಕಾನೂನು ಬಾಹೀರವಾಗಿ ಪಡೆದ ವಿವಿಧ ಭತ್ಯೆಗಳ ಹಣವನ್ನು ಇವರ ವೇತನ, ಪಿಂಚಣಿಗಳಿಂದ ಕಟಾವು ಮಾಡಿ ಸರ್ಕಾರದ ಖಜಾನೆಗೆ ಜಮಾ ಮಾಡಬೇಕು. ಸರ್ಕಾರ ಹಣ ಕೊಳ್ಳೆ ಹೊಡೆದ ಅಧಿಕಾರಿಗಳನ್ನೇ ಹಿರಿಯ ಅಧಿಕಾರಿಗಳಿಗೆ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.