ಸಾರಾಂಶ
ಆಲಮಟ್ಟಿ: ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿನ ಪ್ರಮಾಣವನ್ನು ಮಂಗಳವಾರ ರಾತ್ರಿ 8 ಗಂಟೆಯಿಂದ 3,50,000 ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ. ಸೋಮವಾರ 3 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. ಇದರಿಂದ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರ ಪ್ರದೇಶದ 100 ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ.
ಆಲಮಟ್ಟಿ: ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿನ ಪ್ರಮಾಣವನ್ನು ಮಂಗಳವಾರ ರಾತ್ರಿ 8 ಗಂಟೆಯಿಂದ 3,50,000 ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ. ಸೋಮವಾರ 3 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. ಇದರಿಂದ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರ ಪ್ರದೇಶದ 100 ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ. ಯಲಗೂರ, ಮಸೂತಿ ಗ್ರಾಮದ ಸುಮಾರು 100 ಎಕರೆ ಜಮೀನು ಜಲಾವೃತಗೊಂಡಿದ್ದು, ಅಲ್ಲಿಯ ಕಬ್ಬು, ತೊಗರಿ ಬೆಳೆ ಜಲಾವೃತಗೊಂಡಿದೆ.
ಮಹಾರಾಷ್ಟ್ರದ ಮಳೆಯ ಕಾರಣ ಆಲಮಟ್ಟಿ ಜಲಾಶಯದ ಒಳಹರಿವು 3 ಲಕ್ಷ ಕ್ಯುಸೆಕ್ ಇದೆ. 519.6 ಮೀ ಗರಿಷ್ಠ ಎತ್ತರದ ಆಲಮಟ್ಟಿ ಜಲಾಶಯದ ಮಟ್ಟ ಮತ್ತಷ್ಟು ಕಡಿಮೆಯಾಗಿದ್ದು, 515.50 ಮೀಗೆ ತಲುಪಿದೆ. 123 ಟಿಎಂಸಿ ಅಡಿ ಗರಿಷ್ಠ ಎತ್ತರದ ಜಲಾಶಯದಲ್ಲಿ 68 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.