ರಾಜನಹಳ್ಳಿಯಿಂದ ಹನಗವಾಡಿವರೆಗೆ 3.8 ಕಿಮೀ ಪೈಪ್‌ಲೈನ್ ಬದಲಾವಣೆ

| Published : Jul 29 2025, 01:01 AM IST

ರಾಜನಹಳ್ಳಿಯಿಂದ ಹನಗವಾಡಿವರೆಗೆ 3.8 ಕಿಮೀ ಪೈಪ್‌ಲೈನ್ ಬದಲಾವಣೆ
Share this Article
  • FB
  • TW
  • Linkdin
  • Email

ಸಾರಾಂಶ

22 ಕೆರೆಗಳ ಏತ ನೀರಾವರಿ ಯೋಜನೆಯ ಹೊಸ ಪೈಪ್‌ಲೈನ್ ಕಾಮಗಾರಿಗೆ ₹18 ಕೋಟಿ ಬಿಡುಗಡೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

- ಹೊಸ ಕಾಮಗಾರಿಗೆ ₹18 ಕೋಟಿ ಬಿಡುಗಡೆ: ಸಂಸದೆ ಡಾ.ಪ್ರಭಾ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ 22 ಕೆರೆಗಳ ಏತ ನೀರಾವರಿ ಯೋಜನೆಯ ಹೊಸ ಪೈಪ್‌ಲೈನ್ ಕಾಮಗಾರಿಗೆ ₹18 ಕೋಟಿ ಬಿಡುಗಡೆಗೊಂಡಿದ್ದು, ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ರಾಜನಹಳ್ಳಿಯಿಂದ ಹನಗವಾಡಿವರೆಗೆ 3.8 ಕಿ.ಮೀ. ಪೈಪ್ ಲೈನ್ ಬದಲಾವಣೆ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಹಾಗೂ ಹನಗವಾಡಿಯಿಂದ 18 ಕಿ.ಮೀ. ಪೈಪ್ ಲೈನ್ ಬದಲಾವಣೆ ಕಾಮಗಾರಿ ₹75 ಕೋಟಿ ವೆಚ್ಚದಲ್ಲಿ ನಡೆಸಲು ಎಲ್ಲ ತಾಂತ್ರಿಕ ಒಪ್ಪಿಗೆ ದೊರೆತಿದೆ. ಕೆಲವೇ ದಿನಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

22 ಕೆರೆಗಳ ಏತ ನೀರಾವರಿ ಕಾಮಗಾರಿ ಆರಂಭದಲ್ಲೇ ಕಳಪೆಯಾಗಿ ನಡೆದಿದ್ದರಿಂದ ಪೈಪ್ ಒಡೆದು ನೀರು ಸೋರಿಕೆ ಆಗುತ್ತಿತ್ತೇ ವಿನಃ 22 ಕೆರೆಗಳಿಗೆ ನೀರು ತುಂಬಿಲ್ಲ. ಎಲ್ ಅಂಡ್ ಟಿ ಕಂಪನಿಯ ಕಳಪೆ ಕಾಮಗಾರಿಯಿಂದ ನೀರು ತುಂಬಿಸಲು ಸಾಧ್ಯವಾಗಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸಿದರು.

ಇದನ್ನು ಮನಗಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ನೀರಾವರಿ ಸಚಿವರಿಗೆ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟು ಒತ್ತಡ ಹಾಕಿ ಹೊಸ ಪೈಪ್ ಲೈನ್‌ಗೆ ಕಾಮಗಾರಿಗೆ ಮನವಿ ಮಾಡಿದ್ದರು.

ಹೀಗಾಗಿ ಸರ್ಕಾರ ಮೊದಲ ಹಂತದ 3.8 ಕಿ.ಮೀ. ಕಾಮಗಾರಿಗೆ ₹18 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಶೀಘ್ರವಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ತಕ್ಷಣವೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

- - -

-28ಕೆಡಿವಿಜಿ32: ಡಾ.ಪ್ರಭಾ ಮಲ್ಲಿಕಾರ್ಜುನ್