ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ: ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಶೋಭಾ

| Published : Mar 24 2024, 01:38 AM IST

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ: ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಶೋಭಾ
Share this Article
  • FB
  • TW
  • Linkdin
  • Email

ಸಾರಾಂಶ

ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ 3,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಅಗತ್ಯ ಮೂಲಭೂತ ಸೌಕರ್ಯ‌ಒದಗಿಸಿಕೊಡಲಾಗುತ್ತಿದೆ. ತಾಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು, 13 ಮುಖ್ಯ ಅಧೀಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. 14 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲಿದ್ದು, ತಲಕಾಡಿನಲ್ಲಿ ಇಬ್ಬರನ್ನು ನಿಯೋಜಿಸಲಾಗಿದೆ

ಕನ್ನಡಪ್ರಭ ವಾರ್ತೆ ಟಿ. ನರಸೀಪುರ

ಸೋಮವಾರದಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿಇಒ ಜಿ. ಶೋಭಾ ಹೇಳಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ 3,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಅಗತ್ಯ ಮೂಲಭೂತ ಸೌಕರ್ಯ‌ಒದಗಿಸಿಕೊಡಲಾಗುತ್ತಿದೆ. ತಾಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು, 13 ಮುಖ್ಯ ಅಧೀಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. 14 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲಿದ್ದು, ತಲಕಾಡಿನಲ್ಲಿ ಇಬ್ಬರನ್ನು ನಿಯೋಜಿಸಲಾಗಿದೆ ಎಂದರು.

ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ಪೋಲೀಸ್ ಇಲಾಖೆಯ ಸಹಕಾರ ಕೋರಲಾಗಿದೆ. ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು ಕೇಂದ್ರಗಳಲ್ಲಿ ಹಾಜರಿದ್ದು ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾದಲ್ಲಿ ನಿಗಾವಹಿಸಲಿದ್ದಾರೆ. ಉಳಿದಂತೆ ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಕೇಂದ್ರದ ಆಸು ಪಾಸಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸಲಾಗಿದೆ. ಕೇಂದ್ರದಲ್ಲಿ ಮಕ್ಕಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲಾ ಮಕ್ಕಳು ಬೆಂಚ್ ಮೇಲೆ ಕುಳಿತು ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದರು.

ಮಕ್ಕಳು ವರ್ಷ ಪೂರ್ತಿ ಪರೀಕ್ಷೆಗಾಗಿ ವ್ಯಾಸಾಂಗ ಮಾಡಿರುತ್ತಾರೆ. ಅವರು ಯಾವುದೇ ಆತಂಕ ಇಲ್ಲದೇ ಖುಷಿಯಿಂದ ಪರೀಕ್ಷೆ ಬರೆಯಲು ಬೇಕಾದ ವಾತಾವರಣ ನಿರ್ಮಾಣವಾಗಬೇಕು ಎಂಬ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಮೊದಲು ಖಾಸಗೀ ಯಾಗಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳು ಜಿಲ್ಲಾ ಕೇಂದ್ರಕ್ಕೆ ಹೋಗಬೇಕಿತ್ತು. ಆದರೆ ಈಗ ತಾಲೂಕು ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ಗ್ರಾಮೀಣ ಭಾಗದ 2,345 ಹಾಗು ಪಟ್ಟಣ ಪ್ರದೇಶದ 1501 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದು ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ತಾಲೂಕಿಗೆ ಉತ್ತಮ ಫಲಿತಾಂಶ ಬರಬೇಕೆಂಬ ಆಶಯ ತಮ್ಮದಾಗಿದೆ ಎಂದು ಅವರು ತಿಳಿಸಿದರು.