ಪರೀಕ್ಷೆಗೆ ಸಂಬಂಧಿಸಿದಂತೆ ಪಿಯು ಬೋರ್ಡಿನ ನಿಯಮ ಹಾಗೂ ನಿರ್ದೇಶನದಂತೆ ಕೊಠಡಿಯನ್ನು ಸಿದ್ಧಪಡಿಸಲಾಗಿದೆ ಹಾಗೂ ಕೊಠಡಿ ಮೇಲ್ವಿಚಾರಕರನ್ನು ನೇಮಿಸಿ, ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಸುಲಲಿತವಾಗಿ ಪರೀಕ್ಷೆ ಬರೆಯಲು ಅಗತ್ಯ ಡೆಸ್ಕ್, ಕುಡಿಯುವ ನೀರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ, ಸ್ವಚ್ಛತೆಯಿಂದ ಕೂಡಿದ ಶೌಚಾಗೃಹ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಹೊಳೆನರಸೀಪುರ: ತಾಲೂಕಿನಲ್ಲಿ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಮೂರು ಕೇಂದ್ರಗಳನ್ನು ನಿಗಧಿ ಮಾಡಲಾಗಿದ್ದು, ಒಟ್ಟು 1289 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ ಎಂದು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಆರ್. ದೇವರಾಜು ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಕುರಿತು ಮಾಹಿತಿ ನೀಡಿ ಮಾತನಾಡಿದರು. ನಮ್ಮ ಕಾಲೇಜಿನ ಕೇಂದ್ರದಲ್ಲಿ 659 ವಿದ್ಯಾರ್ಥಿಗಳು ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 276 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಬಾಲಕಿಯರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 354 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಸಂಬಂಧಿಸಿದಂತೆ ಪಿಯು ಬೋರ್ಡಿನ ನಿಯಮ ಹಾಗೂ ನಿರ್ದೇಶನದಂತೆ ಕೊಠಡಿಯನ್ನು ಸಿದ್ಧಪಡಿಸಲಾಗಿದೆ ಹಾಗೂ ಕೊಠಡಿ ಮೇಲ್ವಿಚಾರಕರನ್ನು ನೇಮಿಸಿ, ತರಬೇತಿ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಸುಲಲಿತವಾಗಿ ಪರೀಕ್ಷೆ ಬರೆಯಲು ಅಗತ್ಯ ಡೆಸ್ಕ್, ಕುಡಿಯುವ ನೀರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ, ಸ್ವಚ್ಛತೆಯಿಂದ ಕೂಡಿದ ಶೌಚಾಗೃಹ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಪಟ್ಟಣದ ಟಾಪರ್ಸ್‌ ಪಿ.ಯು ಕಾಲೇಜಿನ ಪ್ರಾಂಶುಪಾಲ ಸಂತೋಷ್ ಕೆ.ಎನ್. ಮಾತನಾಡಿ, ವಿಜ್ಞಾನ ವಿಭಾಗದಲ್ಲಿ 172 ಹಾಗೂ ವಾಣಿಜ್ಯ ವಿಭಾಗದಲ್ಲಿ 100 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿರ್ಣಾಯಕ ಪರೀಕ್ಷೆಯಲ್ಲಿ ಸುಲಲಿತವಾಗಿ ಬರೆಯಲು ಅಗತ್ಯ ತರಬೇತಿ ಜತೆಗೆ ಮರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಕೋರಿದರು.