ಸಾರಾಂಶ
4 ನೇ ರಾಜ್ಯಮಟ್ಟದ ಕೃಷಿ ಮೇಳವು ಜ.12 ರಿಂದ 14ರವರೆಗೆ ಹೊಸನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಹೊಸನಗರಜೆಸಿಐ ಡೈಮಂಡ್, ಡಿಸಿಸಿ ಬ್ಯಾಂಕ್ ಸಹಯೋಗದೊಂದಿಗೆ 3 ದಿನಗಳ 4 ನೇ ರಾಜ್ಯಮಟ್ಟದ ಕೃಷಿ ಮೇಳವು ಜ.12 ರಿಂದ 14ರವರೆಗೆ ಇಲ್ಲಿನ ನೆಹರೂ ಮೈದಾನದಲ್ಲಿ ನಡೆಯಲಿದೆ ಎಂದು ಜೆಸಿಐ ಸಂಸ್ಥೆ ಅಧ್ಯಕ್ಷ ಮಧುಸೂದನ್ ನಾವಡ ತಿಳಿಸಿದರು.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಅಧ್ಯಕ್ಷತೆಯಲ್ಲಿ ಜ.12ರಂದು ಸಂಜೆ 5ಕ್ಕೆ ಸಮ್ಮೇಳನವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟನೆ ಮಾಡುವರು. ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಗತಿಪರ ರೈತರನ್ನು ಸನ್ಮಾನಿಸುವರು. ಶಾಸಕ ಆರಗ ಜ್ಞಾನೇಂದ್ರ ನಿವೃತ್ತ ಸೈನಿಕರನ್ನು ಗೌರವಿಸುವರು ಎಂದು ತಿಳಿಸಿದರು.ವೇದಿಕೆಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಕಾ ವಿವಿ ಕುಲಪತಿ ಆರ್.ಪಿ.ಜಗದೀಶ್ ಸೇರಿದಂತೆ ಕೃಷಿ ವಿಜ್ಞಾನಿಗಳು, ಪ್ರಗತಿ ಪರ ಕೃಷಿಕರು ಉಪಸ್ಥಿತರಿರುವರು. ಅಂದು ರಾತ್ರಿ ಗಂಗಾವತಿ ಪ್ರಾಣೇಶ್ ತಂಡದಿಂದ ಹಾಸ್ಯ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಜ.13ರಂದು ಸಂಜೆ ಶಾಖಾಹಾರಿ ಸಿನೆಮಾ ಹಾಡುಗಳನ್ನು ಸಂಸದ ಬಿ.ವೈ.ರಾಘವೇಂದ್ರ ಬಿಡುಗಡೆ ಮಾಡುವರು. ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ವಿವಿಧ ಗಣ್ಯರು ಹಾಜರಿವರು.ಜ.14ರಂದು ಕೃಷಿ ಹಾಗೂ ತೋಟಗಾರಿಕೆ ಕುರಿತಂತೆ ವಿವಿಧ ಗೋಷ್ಠಿಗಳು, ರೈತರೊಡನೆ ಸಂವಾದ ಕಾರ್ಯಕ್ರಮದಲ್ಲಿ ಕೃಷಿ ಹಾಗೂ ತೋಟಗಾರಿಕೆ ವಿವಿ ವಿಜ್ಞಾನಿಗಳು ಭಾಗವಹಿಸುವರು ಎಂದರು.
ರಾಜ್ಯದ ವಿವಿಧ ಕಡೆಗಳಿಂದ ಕೃಷಿ ಯಂತ್ರ, ಉಪಕರಣ, ಬೀಜ, ರಾಸಾಯನಿಕ ಹಾಗೂ ಸಾವಯವ ಗೊಬ್ಬರ, ವಿವಿಧ ಸಸಿಗಳ ಪ್ರದರ್ಶನ ಹಾಗೂ ಮಾರಾಟದ ಸ್ಟಾಲ್ ಹಾಕಲಾಗಿದೆ. ತಾಲೂಕಿನ ರೈತರು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.ಸಂಸ್ಥೆಯ ರಾಜೇಶ ಕೀಳಂಬಿ, ವಿನಾಯಕ ಅರೆಮನೆ ಮತ್ತಿತರರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))