ಸಾರಾಂಶ
ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಶುಕ್ರವಾರ ಚಾಲನೆ ನೀಡಿದರು.ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಮಾಹಿತಿ ಹಾಗೂ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಸ್ತುವಾರಿ ಸಚಿವರು । ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾದ ದೀಪದೊಳಗೆ ಕರ್ನಾಟಕದ ಭೂಪಟ, ಹುಲಿ ಮೇಲೆ ಕುಳಿತಿರುವ ಮಾದಪ್ಪನ ಕಲಾಕೃತಿಗಳು
ಕನ್ನಡಪ್ರಭ ವಾರ್ತೆ ಚಾಮರಾಜನಗರನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಶುಕ್ರವಾರ ಚಾಲನೆ ನೀಡಿದರು.ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಮಾಹಿತಿ ಹಾಗೂ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಉದ್ಘಾಟಿಸಿದರು.ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಯಾದ ಹೂವಿನಿಂದ ಕಲಾಕೃತಿಗಳಾದ ದೀಪದೊಳಗೆ ಕರ್ನಾಟಕದ ಭೂಪಟ, ಅಲಂಕೃತ ಆನೆಗಳು, ವಿವಿಧ ಮಾದರಿಯ ಹೂಜೋಡಣೆ, ಹೂ ಗುಚ್ಚಗಳು, ಹುಲಿ ಮೇಲೆ ಕುಳಿತಿರುವ ಮಲೆ ಮಹದೇಶ್ವರಸ್ವಾಮಿ, ವಿವಿಧ ಬಗೆಯ ತರಕಾರಿ ಕೆತ್ತನೆ, ಸಿರಿಧಾನ್ಯದ ಕಣ, ಅಲಂಕಾರಿಕ ಹೂಗಿಡಗಳು, ಕೃಷಿ, ತೋಟಗಾರಿಕೆ ಸಂಬಂಧಿತ ವಿವಿಧ ಇಲಾಖೆಗಳ ಮಳಿಗೆಗಳು, ಪ್ರಾತ್ಯೇಕ್ಷಿಕೆಗಳು, ತಾಂತ್ರಿಕ ಮಾಹಿತಿ ಎಲ್ಲವನ್ನು ಸಹ ಜಿಲ್ಲಾ ಉಸ್ತುವಾರಿ ಸಚಿವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವೆಂಕಟೇಶ್ ಅವರು ವಿವಿಧ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಮಾಹಿತಿ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಉತ್ತಮ ಪ್ರಯತ್ನವಾಗಿದೆ. ರೈತರು ಹಾಗೂ ಜನಸಾಮಾನ್ಯರಿಗೆ ವಿವಿಧ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿಯ ಅರಿವು ಅವಶ್ಯವಾಗಿದೆ ಎಂದರು.ತೋಟಗಾರಿಕಾ ಬೆಳೆಗಳ ಕುರಿತು ಹೊಸ ಹೊಸ ವಿಚಾರಗಳನ್ನು ಅರಿಯಲು ಅಸಕ್ತ ಹೊಂದಬೇಕು. ಫಲಪುಷ್ಪ ಪ್ರದರ್ಶನದ ಮಾಹಿತಿ ಹೆಚ್ಚು ಜನರನ್ನು ತಲುಪಬೇಕು. ಸರ್ಕಾರದ ಉದ್ದೇಶ ಹಾಗೂ ಸೌಲಭ್ಯಗಳು ಫಲಪ್ರದವಾಗಬೇಕು. ಈ ಕಾರ್ಯದಲ್ಲಿ ಎಲ್ಲರ ಜವಾಬ್ದಾರಿಯೂ ಇದೆ ಎಂದು ತಿಳಿಸಿದರು. ಕೋವಿಡ್ ವೇಳೆ ಆಕ್ಸಿಜನ್ ದುರಂತದಲ್ಲಿ ಸಂತ್ರಸ್ತರಾದ ಕುಟುಂಬದ 32 ಅವಲಂಬಿತರಿಗೆ ಫೆ.1ರಿಂದ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ. ಅವಲಂಬಿತರಿಗೆ ಖಾಯಂ ಉದ್ಯೋಗ ಕೊಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಅಲ್ಲಿಯವರೆಗೆ ಹೊರಗುತ್ತಿಗೆ ಅಧಾರದಲ್ಲಿ ಜಿಲ್ಲಾಡಳಿತದಲ್ಲಿ ಉದ್ಯೋಗ ನೀಡಲಾಗುತ್ತಿದೆ ಎಂದು ತಿಳಿಸಿದರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಫಲಪುಷ್ಪ ಪ್ರದರ್ಶನದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳು, ಪಾಲಿಹೌಸ್, ತೋಟಗಾರಿಕೆ ಬೆಳೆಗಳಿಗೆ ಸಹಾಯಧನ, ನೀರಾವರಿ ಸೌಲಭ್ಯಗಳುಗಂಗಾ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುತ್ತಿರುವ ಆರೋಗ್ಯಕರ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಕುರಿ, ಕೋಳಿ ಸಾಕಣೆ, ಉತ್ತಮ ತಳಿಗಳ ಮೀನುಮರಿ ಉತ್ಪಾದನೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಾಯಧನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ತೋಟಗಾರಿಕಾ ಬೆಳೆಗಳ ಮಾಹಿತಿ ಕುರಿತು ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಡಿಸಿ ಶಿಲ್ಪಾ ನಾಗ್, ಎಸ್ಪಿ ಪದ್ಮಿನಿ ಸಾಹು, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ, ಕಾಂಟ್ರಾಕ್ಟರ್, ಎಡಿಸಿ ಗೀತಾ ಹುಡೇದ, ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ಮುಖಂಡರು, ಇತರರು ಇದ್ದರು.