3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ತೊಂದರೆ ಏನು?: ಕೆ.ಎನ್‌.ರಾಜಣ್ಣ

| Published : Jun 23 2024, 02:01 AM IST

3 ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ತೊಂದರೆ ಏನು?: ಕೆ.ಎನ್‌.ರಾಜಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

‘ಮೂರು ಡಿಸಿಎಂ ಮಾಡಿದರೆ ತೊಂದರೆ ಏನು? ಈ ಕುರಿತಾದ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ’ ಎಂದು ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

‘ಮೂರು ಡಿಸಿಎಂ ಮಾಡಿದರೆ ತೊಂದರೆ ಏನು? ಈ ಕುರಿತಾದ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ’ ಎಂದು ಸಹಕಾರಿ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕು ಎಂಬ ಬೇಡಿಕೆ ಕುರಿತು ಪ್ರತಿಕ್ರಿಯಿಸಿ, ‘ನಾನು ಮೊದಲಿನಿಂದಲೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿ ಎಂದು ಹೇಳುತ್ತಲೇ ಬಂದಿದ್ದೇನೆ. ಮಧ್ಯೆ ಲೋಕಸಭಾ ಚುನಾವಣೆ ಬಂದಿದ್ದರಿಂದ ಎಐಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಈ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದು ಹೇಳಿದ್ದರು. ಆದ್ದರಿಂದ ನಾವೆಲ್ಲಾ ಸುಮ್ಮನಿದ್ದೆವು. ಇದೀಗ ಸತೀಶ ಜಾರಕಿಹೊಳಿಯವರು ಹೆಚ್ಚುವರಿ ಡಿಸಿಎಂ ಸೃಷ್ಟಿಯಾಗಬೇಕು ಎಂದು ಹೇಳಿದ್ದಾರೆ. ಅವರು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಅವರು ಮಾತನಾಡಿದ್ದು ಸರಿಯಾಗಿಯೇ ಇದೆ. ಅವರ ಹೇಳಿಕೆಗೆ ನನ್ನ ಸಹಮತವಿದೆ’ ಎಂದರು.