ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯ ಸರ್ಕಾರ ರೈತರಿಗೆ ಮಾರಕವಾಗಿರುವ ಮೂರು ಕೃಷಿ ಮಸೂದೆಯನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹಲಗಾ ರಾಷ್ಟ್ರೀಯ ಹೆದ್ದಾರಿಯ ಬಳಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯ ಸರ್ಕಾರ ರೈತರಿಗೆ ಮಾರಕವಾಗಿರುವ ಮೂರು ಕೃಷಿ ಮಸೂದೆಯನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹಲಗಾ ರಾಷ್ಟ್ರೀಯ ಹೆದ್ದಾರಿಯ ಬಳಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಮಸೂದೆಯನ್ನು ಈಗಾಗಲೇ ಅದು ಹಿಂಪಡೆದಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಹಿಂಪಡೆಯುತ್ತಿಲ್ಲ. ಇದರಿಂದ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗದಂತಾಗಿದೆ ಎಂದು ಆರೋಪಿಸಿದರು.
ರೈತರಿಗೆ ನ್ಯಾಯ ಸಮ್ಮತ ಬೆಲೆ ನಿಗದಿ ಮಾಡಲು ಸ್ವಾಮಿನಾಥನ್ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು. ಹಲವಾರು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.