ಇಲ್ಲಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಅಕ್ಕ ಪಡೆ ತಂಡವು ಸಿಆರ್‌ಪಿ ಹಾಗೂ ಇಸಿಒ ಇಲಾಖೆಗಳ ಸಹಯೋಗದೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಸುಮಾರು 30 ಮಕ್ಕಳು ಶಿಕ್ಷಣ ಪಡೆಯದೆ, ಶಾಲೆಗೆ ತೆರಳದೆ ಫ್ಯಾಕ್ಟರಿಯ ಸುತ್ತಮುತ್ತಲೇ ಕಾಲ ಕಳೆಯುತ್ತಿರುವುದು ಕಂಡುಬಂದಿತು.

ಬ್ರಹ್ಮಾವರ: ಇಲ್ಲಿನ ಫಿಶ್ ಫ್ಯಾಕ್ಟರಿಯೊಂದರಲ್ಲಿ ಅಕ್ಕ ಪಡೆ ತಂಡವು ಸಿಆರ್‌ಪಿ ಹಾಗೂ ಇಸಿಒ ಇಲಾಖೆಗಳ ಸಹಯೋಗದೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಸುಮಾರು 30 ಮಕ್ಕಳು ಶಿಕ್ಷಣ ಪಡೆಯದೆ, ಶಾಲೆಗೆ ತೆರಳದೆ ಫ್ಯಾಕ್ಟರಿಯ ಸುತ್ತಮುತ್ತಲೇ ಕಾಲ ಕಳೆಯುತ್ತಿರುವುದು ಕಂಡುಬಂದಿತು.

6 ವರ್ಷ ಮೇಲ್ಪಟ್ಟ ಹಾಗೂ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಈ ಮಕ್ಕಳನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ನಂತರ 7 ಬಾಲಕಿಯರನ್ನು ಬಾಲಕಿಯರ ಬಾಲಮಂದಿರಕ್ಕೆ ಹಾಗೂ 23 ಬಾಲಕರನ್ನು ಬಾಲಕರ ಬಾಲಮಂದಿರಕ್ಕೆ ದಾಖಲಿಸಲಾಯಿತು.