ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ಮಾಡಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗಾಗಿ ಅಕ್ರಮವಾಗಿ ಉಪಯೋಗಿಸುತ್ತಿದ್ದ ಹೋಟೆಲ್, ರೆಸ್ಟೋರೆಂಟ್, ಟೀ ಅಂಗಡಿ, ಬೇಕರಿ, ಕಾಂಡಿಮೆಂಟ್ಸ್, ಬಾರ್ & ರೆಸ್ಟೋರೆಂಟ್‌ಗಳಿಗೆ ದಿಢೀರ್ ದಾಳಿ ನಡೆಸಿ ಅಕ್ರಮವಾಗಿ ಬಳಸುತ್ತಿದ್ದ 30 ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಹಾಗೂ ಎಲ್ ಪಿಜಿ ಆರ್ ಎಸ್ ಅಂಡ್ ಡಿ ಆದೇಶ 2000 ರನ್ವಯ ಪ್ರಕರಣ ದಾಖಲಿಸಲಾಗಿರುತ್ತದೆ. ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಉಪಯೋಗಿಸಬಾರದೆಂದು ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ. ನಿಯಮ ಮೀರಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಉಪಯೋಗಿಸುತ್ತಿದ್ದಲ್ಲಿ, ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಜಿ.ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.