ಬಜೆಟ್‌ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆ

| Published : Jan 30 2024, 02:00 AM IST

ಬಜೆಟ್‌ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆ
Share this Article
  • FB
  • TW
  • Linkdin
  • Email

ಸಾರಾಂಶ

ಬಜೆಟ್‌ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು. ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿಂದು ದ್ವಿತಳಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೇಷ್ಮೆ ಬೆಳೆ ಉತ್ತೇಜನಕ್ಕಾಗಿ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲು ಕ್ರಮ ವಹಿಸಲಾಗುವುದು. ರೇಷ್ಮೆ ಬೆಳೆಗಾರರು, ಡೀಲರ್ ಗಳಿಗೆ ಅನುಕೂಲವಾಗುವಂತಹ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಉಸ್ತುವಾರಿ ಸಚಿವ ವೆಂಕಟೇಶ್‌ ಹೇಳಿಕೆ । ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯ ದ್ವಿತಳಿ ಘಟಕ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ ಬಜೆಟ್‌ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು. ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿಂದು ದ್ವಿತಳಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೇಷ್ಮೆ ಬೆಳೆ ಉತ್ತೇಜನಕ್ಕಾಗಿ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲು ಕ್ರಮ ವಹಿಸಲಾಗುವುದು. ರೇಷ್ಮೆ ಬೆಳೆಗಾರರು, ಡೀಲರ್ ಗಳಿಗೆ ಅನುಕೂಲವಾಗುವಂತಹ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ಚಾಮರಾಜನಗರ ಜಿಲ್ಲೆಯು ರೇಷ್ಮೆ ಬೆಳೆಗೆ ಪ್ರಸಿದ್ದಿಯಾಗಿದೆ. ಜಿಲ್ಲೆಯಲ್ಲಿ ರೇಷ್ಮೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಇದೆ. ಈ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ.ಆರ್. ಕೃಷ್ಣಮೂರ್ತಿ ರೇಷ್ಮೆ ಇಲಾಖೆಯಿಂದ ರೈತರಿಗೆ ಬಹಳಷ್ಟು ಸಹಕಾರಿಯಾಗಿದೆ. ಮೈಸೂರು ಸಿಲ್ಕ್ ಪ್ರಪಂಚದಲ್ಲಿಯೇ ಹೆಸರು ಪಡೆದಿದೆ. ರೇಷ್ಮೆ ಬೆಳೆಗಾರರ ನೆರವಿಗೆ ಬರಬೇಕಿದೆ. ಕುದೇರಿನಲ್ಲಿರುವ ರೇಷ್ಮೆ ತರಬೇತಿ ಶಾಲೆ ಪುನರ್ ಆರಂಭವಾಗಬೇಕು ಎಂದರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಪಂ ಸಿಇಓ ಆನಂದ್‌ ಪ್ರಕಾಶ್‌ ಮೀನಾ, ಎಎಸ್ಪಿ ಉದೇಶ್‌, ಎಸಿ ಮಹೇಶ್, ರೇಷ್ಮೆ ಇಲಾಖೆ ಡಿಡಿ ರಾಚಪ್ಪ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.